Breaking
Mon. Dec 23rd, 2024

ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಿಜೆಪಿ ಹೈಕಮಾಂಡ್‌  ಮೈಸೂರಿನಲ್ಲಿ ಈ ಬಾರಿ ಯದುವೀರ್‌ ಒಡೆಯರ್‌  ಅವರನ್ನು ಕಣಕ್ಕೆ

ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ.

ಹೌದು. ಹಾಲಿ ಸಂಸದರಾದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿರುವ ಅವರ ಜಾಗದಲ್ಲಿ ಮೈಸೂರಿನ ರಾಜವಂಶಸ್ಥರ ಕುಡಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಕಳೆದ ಕೆಲ ದಿನಗಳಿಂದ ಯದುವೀರ್‌ ಒಡೆಯರ್‌ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಯಾಗಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್ ಒಡೆಯರ್ ಹೆಸರು ಪ್ರಸ್ತಾಪವಾಗಿದೆ.

ಯದುವೀರ್ ಒಡೆಯರ್ ಅವರನ್ನು ಬಿಜೆಪಿ ಸಂಪರ್ಕಿಸಿದ್ದು, ಒಪ್ಪಿಗೆ ಸೂಚಿಸಲಾಗಿದೆ. ಆದರೆ ಪ್ರಮೋದಾ ದೇವಿ ಗ್ರೀನ್ ಸಿಗ್ನಲ್‌ಗೆ ನಾಯಕರು ಕಾಯುತ್ತಿದ್ದಾರೆ. ಒಂದು ವೇಳೆ ಪ್ರಮೋದಾ ದೇವಿ ಒಪ್ಪಿಗೆ ನೀಡಿದರೆ ಯದುವೀರ್‌ ಒಡೆಯರ್‌ ರಾಜಕಿಯ ಪ್ರವೇಶಿಸಲಿದ್ದಾರೆ.

ಯಡಿಯೂರಪ್ಪ ಮತ್ತು ಆರ್‌ಎಸ್‌ಎಸ್‌ ನಾಯಕರೊಬ್ಬರ ಮೂಲಕ ಯದುವೀರ್‌ ಅವರನ್ನು ಮನವೊಲಿಕೆ ಮಾಡಿದರು. ಮನವೊಲಿಕೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಜೊತೆ ಯದುವೀರ್ ಒಡೆಯರ್‌ಗೆ ಅಮಿತ್ ಶಾ ನೇತೃತ್ವದಲ್ಲಿ ಸಭೆಯಲ್ಲೇ ಶಿಫಾರಸ್ಸು ಮಾಡಲಾಯಿತು.

ಮೈಸೂರಿನ ಕೊನೆಯ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್‌ ಅವರ ಏಕೈಕ ಪುತ್ರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ನಾಲ್ಕು ಬಾರಿ ಮೈಸೂರಿನ ಸಂಸದರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ಸಿನಿಂದ ನಾಲ್ಕು ಬಾರಿ ಗೆದ್ದು ಎರಡು ಬಾರಿ ಅವರು ಸೋತಿದ್ದರು. 1984 ,1989, 1996, 1999ರಲ್ಲಿ ಗೆದ್ದಿದ್ದರೆ 1991 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು.

ಹಳೆ ಮೈಸೂರು ಭಾಗದ ಮೈಸೂರು ರಾಜವಂಶಸ್ಥರ ಬಗ್ಗೆ ಜನರಲ್ಲಿ ಗೌರವವಿದೆ. ಮೈಸೂರಿನಲ್ಲಿ ಶಿಕ್ಷಣ,ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ರಾಜರು ಭಾರೀ ಕೊಡುಗೆ ನೀಡಿದ್ದಾರೆ. ಈ ಸಮಾಜಮುಖಿ ಕೆಲಸದಿಂದ ಪೂಜೆ ರಾಜರ ಫೋಟೋವನ್ನು ಇಟ್ಟು ಮಾಡುವವರಿದ್ದಾರೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದರೆ ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದಲ್ಲೂ ಪ್ರಭಾವ ಬೀರಬಹುದು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

ಸತತ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಪ್ರತಾಪ್ ಸಿಂಹ ಎರಡನೇ ಬಾರಿಗೆ ಲಭ್ಯತೆ. ರಾಜ್ಯದ ಹಲವು ಬಿಜೆಪಿ ಸಂಸದರು ತಮ್ಮ ಸಾಧನೆ ಕೈಪಿಡಿ ಹೊರತರದೇ ಇದ್ದರೂ ಪ್ರತಾಪ್ ಸಿಂಹ ಬಿಜೆಪಿಯ ಅಗ್ರ ನಾಯಕರಿಗೆ ತಮ್ಮ ಕೆಲಸದ ಸಾಧನೆಯನ್ನು ಕೈಪಿಡಿ ಮಾಡಿದ್ದಾರೆ.

ಒಂದು ವೇಳೆ ಲೋಕಸಭೆ ಟಿಕೆಟ್ ಸಿಗದೇ ಇದ್ದರೆ ಪ್ರತಾಪ್ ಸಿಂಹ ಅವರ ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಪ್ರಶ್ನೆ ಬರುತ್ತದೆ. ಇನ್ನೂ ಮೈಸೂರು ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಅಂತಿಮವಾಗಿಲ್ಲ. ಯದುವೀರ್‌ ಒಡೆಯರ್‌ಪ್ರಸ್ತಾಪಿಸಿದರೆ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗುವುದು ಅನುಮಾನ. ಹೀಗಾಗಿ ಬೇರೆ ಲೋಕಸಭಾ ಟಿಕೆಟ್ ಸಿಕ್ಕರೂ ಸಿಗಬಹುದು ಎಂಬ ಮಾತು ಕೇಳಿ ಬಂದಿದೆ.

ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ 2014ರ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 31,608 ಮತಗಳಿಂದ ಗೆದ್ದರೆ, 2019ರ ಚುನಾವಣೆಯಲ್ಲಿ 1,38,647 ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಸದ್ಯ ಪ್ರತಾಪ್ ಸಿಂಹ ರಾಜಕೀಯ ಭವಿಷ್ಯ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿದೆ.

 

Related Post

Leave a Reply

Your email address will not be published. Required fields are marked *