ಕರ್ನಾಟಕ ರಾಜ್ಯ : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಮುಖ್ಯಮಂತ್ರಿ ಅಂಥವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500, ₹10,000 ಹಾಗೂ ಸಹಾಯಕಿಯರಿಗೆ ₹6,000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ.
ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು.
ಗೃಹಲಕ್ಷ್ಮೀ ಯೋಜನೆಯಡಿ 2,000 ರೂ.ಗಳನ್ನು ಮನೆ ಯಜಮಾನಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಒದಗಿಸಲಾಗುತ್ತಿದೆ. ಶೇ.60 ಅಂಗನವಾಡಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ದೊರೆಯುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅವರೊಂದಿಗೆ ಸುಮಾರು 20 ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.