ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮಗಗೊಳಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಇವತ್ತು ಸಾಯಂಕಾಲ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಲ್ಲೇ ಇದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವವರ ಸಮಕ್ಷಮ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಬಿಜೆಪಿ ನಾಯಕರೆಲ್ಲ ಬಿಜೆಪಿ-ಜೆಡಿಎಸ್ ಮೈತ್ರಿ ಎಲ್ಲ 28 ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿದ್ದರೆ ಯಡಿಯೂರಪ್ಪ 28ರಲ್ಲಿ 25 ಗೆಲ್ಲಲಿದ್ದೇವೆ ಎನ್ನುತ್ತಾರೆ. ಇದೇ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕ ಪ್ರವಾಸ ಮಾಡಲಿರುವುದರಿಂದ ಅವರ ಸಭೆಗಳಿಗೆ ಹೆಚ್ಚೆಚ್ಚು ಜನರನ್ನು ಸೇರಿಸಬೇಕಿದೆ ಎಂದು ಹೇಳಿದ ಯಡಿಯೂರಪ್ಪ, ಮೈಸೂರು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ ಒಡೆಯರ್ ಸ್ಪರ್ಧಿಸುವುದು ಖಚಿತವೇ ಎಂದು ಕೇಳಿದ ಪ್ರಶ್ನೆಗೆ ಯಾವುದೇ ಕ್ಷೇತ್ರದ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ ಎಂದರು.