ಇಂಡಿಯನ್ ಪ್ರೀಮಿಯರ್ ಆರ್ ಸೀಸನ್-17 ಗಾಗಿ ಸಿಬಿಐ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಆರ್ಸಿಬಿ, ದುಬೈನಲ್ಲಿ ನಡೆದ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಈ ಮೂಲಕ 25 ಆಟಗಾರರ ಬಲಿಷ್ಠ ಬಳಗವನ್ನು ರೂಪಿಸಿದೆ.
ಈ ಬಳಗದಿಂದ ಆರ್ಸಿಬಿ ಪರ ಕಣಕ್ಕಿಳಿಯುವ ಆಟಗಾರರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಂಪಲ್. ಕಳೆದ ಸೀಸನ್‌ನಲ್ಲಿ ಆಡಿದ್ದ ಆಟಗಾರರೇ ಈ ಬಾರಿ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ಟಾಪ್-4 ನಲ್ಲಿ ಯಾವುದೇ ಬದಲಾವಣೆ ಕಂಡು ಬರುವುದಿಲ್ಲ ಎಂದು ಹೇಳಬಹುದು. ಅದರಂತೆ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ ಇಲ್ಲವೆನ್ ಹೇಗಿರಲಿದೆ ನಿಮಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ…
1- ಫಾಫ್ ಡುಪ್ಲೆಸಿಸ್: ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಈ ಬಾರಿ ಕೂಡ ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಡುಪ್ಲೆಸಿಸ್ ಕಳೆದ ಸೀಸನ್‌ನಲ್ಲಿ 14 ಪಂದ್ಯಗಳಿಂದ ಒಟ್ಟು 730 ರನ್ ಪೇರಿಸಿದ್ದರು. ಹೀಗಾಗಿ ಈ ಬಾರಿ ಕೂಡ ಡುಪ್ಲೆಸಿಸ್ ಇನಿಂಗ್ಸ್ ಆರಂಭಿಸಲಿದ್ದಾರೆ.
2- ವಿರಾಟ್ ಕೊಹ್ಲಿ: ಕಳೆದ ಸೀಸನ್‌ನಲ್ಲಿ ಫಾಫ್ ಡುಪ್ಲೆಸಿಸ್‌ಗೆ ಜೋಡಿಯಾಗಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಿದ್ದರು. ಜೊತೆಗೆ 14 ಪಂದ್ಯಗಳಿಂದ ಒಟ್ಟು 639 ರನ್ ಕಲೆಹಾಕಿದ್ದಾರೆ. ಹೀಗಾಗಿ ಡುಪ್ಲೆಸಿಸ್ ಜೊತೆ ಕಿಂಗ್ ಕೊಹ್ಲಿ ಇನಿಂಗ್ಸ್ ಆರಂಭಿಸುವುದು ಖಚಿತ.
3- ರಜತ್ ಪಾಟಿದಾರ್: ಆರ್ಸಿಬಿ ಪರ ಮೂರನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಕಣಕ್ಕಿಳಿಯಲಿದ್ದಾರೆ. 2022 ರಲ್ಲಿ ಆರ್ಸಿಬಿ ಪರ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಪಾಟಿದಾರ್ 8 ಪಂದ್ಯಗಳಿಂದ 333 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ರಜತ್ ಆಡುವ ಸಾಧ್ಯತೆ ಹೆಚ್ಚಿದೆ.
4- ಗ್ಲೆನ್ ಮ್ಯಾಕ್ಸ್ವೆಲ್: ಆರ್ಸಿಬಿ ತಂಡ ನಾಲ್ಕನೇ ಕ್ರಮಾಂಕ ಗ್ಲೆನ್ ಮ್ಯಾಕ್ಸ್ವೆಲ್ಗೆ ಸೀಮಿತ. ಕಳೆದ ಸೀಸನ್‌ನಲ್ಲಿ ಇದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಮ್ಯಾಕ್ಸಿ ಒಟ್ಟು 400 ರನ್ ಕಲೆಹಾಕಿದ್ದರು. ಹೀಗಾಗಿ ಈ ಬಾರಿ ಕೂಡ ಅವರು 4ನೇ ಕ್ರಮಾಂಕದಲ್ಲೇ ಆಡಲಿದ್ದಾರೆ.
5- ಕ್ಯಾಮರಾನ್ ಗ್ರೀನ್: 5ನೇ ಕ್ರಮಾಂಕದಲ್ಲಿ ಆರ್ಸಿಬಿ ತಂಡಕ್ಕೆ ಹೊಸದಾಗಿ ಎಂಟ್ರಿ ಕೊಟ್ಟಿರುವ ಆಸ್ಟ್ರೇಲಿಯಾ ಆಲ್ರೌಂಡರ್ ಕ್ಯಾಮರಾನ್ ಗ್ರೀನ್ ಕಣಕ್ಕಿಳಿಯಲಿದ್ದಾರೆ. ಮುಂಬೈ ಇಂಡಿಯನ್ಸ್ ಪರ 16 ಪಂದ್ಯಗಳಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಗ್ರೀನ್ ಒಟ್ಟು 452 ರನ್ ಕಲೆಹಾಕಿದ್ದಾರೆ. ಹೀಗಾಗಿ ಅವರನ್ನು 5ನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆ ಹೆಚ್ಚಿದೆ.
6- ಮಹಿಪಾಲ್ ಲೋಮ್ರರ್: 6ನೇ ಕ್ರಮಾಂಕದಲ್ಲಿ ಎಡಗೈ ಸ್ಪಿನ್ ಆಲ್ರೌಂಡರ್ ಮಹಿಪಾಲ್ ಲೋಮ್ರರ್ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಏಕೆಂದರೆ ಮಹಿಪಾಲ್ ಕಳೆದ ಸೀಸನ್ ನಲ್ಲಿ ಆರ್ಸಿಬಿ ಪರ 12 ಪಂದ್ಯಗಳನ್ನಾಡಿದ್ದರು. ಹೀಗಾಗಿ ಈ ಬಾರಿ ಅವರನ್ನೇ ಆಡುವ ಬಳಗದಲ್ಲಿ ಕೂಡ ಬಳಸಿಕೊಳ್ಳಬಹುದು.
7- ದಿನೇಶ್ ಕಾರ್ತಿಕ್: ಆರ್ಸಿಬಿ ಪರ ಈ ಬಾರಿ ಕೂಡ ಕೀಪರ್ ಬ್ಯಾಟ್ಸ್ಮನ್ ಆಗಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ 7ನೇ ಕ್ರಮಾಂಕದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಲಿದ್ದಾರೆ.
8- ಮೊಹಮ್ಮದ್ ಸಿರಾಜ್: ಆರ್ಸಿಬಿ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಸೀಸನ್‌ನಲ್ಲಿ ಸಿರಾಜ್ 14 ಪಂದ್ಯಗಳಿಂದ 19 ಕಬಳಿಸಿ ಮಿಂಚಿದ್ದರು.
9- ವಿಜಯ್ ಕುಮಾರ್ ವೈಶಾಕ್: ಕಳೆದ ಸೀಸನ್‌ನಲ್ಲಿ ಆರ್ಸಿಬಿ ಪರ 7 ಪಂದ್ಯಗಳನ್ನಾಡಿದ್ದ ವಿಜಯ್ ಕುಮಾರ್ ವೈಶಾಕ್ 9 ವಿಹಾರ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಮೊದಲಾರ್ಧದ ಪಂದ್ಯಗಳಲ್ಲಿ ಕರ್ನಾಟಕದ ವೇಗಕ್ಕೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
10- ರೀಸ್ ಟೋಪ್ಲಿ: ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ರೀಸ್ ಟೋಪ್ಲಿ ಕೂಡ ಈ ಬಾರಿ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಭಾಗವಾಗಲಿದ್ದಾರೆ. ಏಕೆಂದರೆ ಟೋಪ್ಲಿ ಅವರನ್ನು ಆರ್ಸಿಬಿ ಕಳೆದ ಸೀಸನ್ನಲ್ಲೇ ಆರಂಭಿಕ ಪಂದ್ಯಗಳಲ್ಲಿ ಕಣಕ್ಕಿಳಿಸಿತು. ಆದರೆ ಗಾಯದ ಕಾರಣ ಅವರು ಅರ್ಧದಲ್ಲೇ ಶಾಲೆಯಿಂದಲೇ ಹೊರ ನಡೆದಿದ್ದರು. ಹೀಗಾಗಿ ಈ ಬಾರಿ ಟೋಪ್ಲಿ ಆಡುವ ಬಳಗದ ಭಾಗವಾಗುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.
11- ಕರ್ಣ್ ಶರ್ಮಾ: ಐಪಿಎಲ್ 2023 ರಲ್ಲಿ ಆರ್ಸಿಬಿ ಪರ 7 ಪಂದ್ಯಗಳನ್ನಾಡಿದ್ದ ಸ್ಪಿನ್ನರ್ ಕರ್ಣ್ ಶರ್ಮಾ ಒಟ್ಟು 10 ರನ್ ಕಬಳಿಸಿದ್ದರು. ಹೀಗಾಗಿ ಈ ಬಾರಿ ಕೂಡ ಆರ್ಸಿಬಿ ತಂಡದ ಸ್ಪಿನ್ನರ್ ಆಯ್ಕೆಯಲ್ಲಿ ಕರ್ಣ್ ಹೆಸರು ಮುಂಚೂಣಿಯಲ್ಲಿರಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾ, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ಮೊಹರಾಜ್ ವೈರಾಜ್, ವಿಜಯ್, ಆಕಾಶ್ , ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.