Breaking
Tue. Dec 24th, 2024

ಹೈಕೋರ್ಟ್ ಕೇಂದ್ರ ರಾಜ್ಯ ಸರ್ಕಾರಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ವಿಧಾನಸಭೆ ಚುನಾವಣೆ 2023ರ ವೇಳೆ ಮತದಾರರಿಗೆ ಆಮಿಷ ಒಡ್ಡಿದ ಆರೋಪ ಸಂಬಂಧ ಚುನಾವಣಾ ಅಕ್ರಮ ತಡೆಗಟ್ಟಲು ನಿರ್ದೇಶನ ಕೋರಿ ಯುವ ಜೆಡಿಎಸ್ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು ವಿಚಾರಣೆ ನಡೆದ ಹೈಕೋರ್ಟ್ ಕೇಂದ್ರ ರಾಜ್ಯ ಸರ್ಕಾರಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ರಾಜ್ಯ ಸರ್ಕಾರಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರತಿವಾದಿಗಳಿಗೆ  ಪಿಐಎಲ್ ಪ್ರತಿ ದಾಖಲೆ ಒದಗಿಸಲು ಸೂಚನೆ ನೀಡಿ ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ ಒಂದಕ್ಕೆ ಮುಂದೊಡಲಾಗಿದೆ.

ಆಧುನಿಕ ತಂತ್ರಜ್ಞಾನ ಬಳಸಿ ಮತದಾರರಿಗೆ ಆಮಿಷ ವಡ್ಡಲಾಗುತ್ತಿದೆ ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡಲಾಗಿದೆ ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡೆಲ್ ಇನ್ನು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ನಿಖಿಲ್ ಕುಮಾರಸ್ವಾಮಿ ಮತ್ತು ಇತರರು ಕೋರ್ಟ್ಗೆ ಪಿಎಲ್ಐ ಸಲ್ಲಿಸಿದರು.

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಮತದಾರರನ್ನು ತಮ್ಮ ಪಕ್ಷದತ್ತ ಸೆಳೆದೆಕೊಳ್ಳಲು ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಘೋಷಣೆ ಮಾಡಿತ್ತು ಅಲ್ಲದೆ ಸರ್ಕಾರ ರಚನೆಯಾದ ದಿನವೇ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಬರವಸೆ ನೀಡಿ ರಾಜ್ಯದ್ಯಂತ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಗಿತ್ತು.

60,000 ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗೆ ಹೋಗಿ ವಿತರಣೆ ಮಾಡಲಾಗಿದೆ. ಕಾಡುಗಳನ್ನು ಎಟಿಎಂ ರೀತಿ ಬಳಸಬಹುದು ಅದರಲ್ಲಿ ಗಿಫ್ಟ್ ಖರೀದಿ ಮಾಡಬಹುದು ಎಂದು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಅಲ್ಲದೆ ಮತದಾನ ಬಳಿಕ ಕಾರ್ಡ್ ಬಳಸಬಹುದು ಎಂದು ಸುಳ್ಳು ಭರವಸೆ ನೀಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ವ್ಯತ್ಯಾಸ ಆಗಿದೆ ಮತಕ್ಕೆ  ಪ್ರಚಾರ ಆಗಿದ್ದಾರೆ, ಬಾರ್ ಕೋಡ್ ಯಾಕೆ ಫ್ರೆಂಡ್ ಮಾಡುತ್ತಿದ್ದರು ಮತದಾರರಿಗೆ ದಾರಿ ತಪ್ಪಿಸುವ ಕೆಲಸ ಆಗಿದೆ ಎನ್ನಲಾಗಿದೆ.

 

 

Related Post

Leave a Reply

Your email address will not be published. Required fields are marked *