ಟೆಂಪಲ್ ರನ್ ಮುಗಿಸಿಕೊಂಡು ಸದ್ಯ ಯಶ್ (ಯಶ್) ಗೋವಾದಲ್ಲಿ (ಗೋವಾ) ಬೀಡು ಬಿಟ್ಟಿದ್ದಾರೆ. ಗೋವಾದ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಸದ್ಯ ಅವರು ಗೋವಾನಲ್ಲಿ ಬೀಡು ಬಿಟ್ಟಿರೋದು ಟಾಕ್ಸಿಕ್ ಸಿನಿಮಾದ ಶೂಟಿಂಗ್ ಗಾಗಿ ಎನ್ನುವ ವಿಚಾರ ಹರಿದಾಡುತ್ತಿದೆ. ಟಾಕ್ಸಿಕ್ ಸಿನಿಮಾದ ಶೂಟಿಂಗ್ ಸ್ಥಳಗಳಲ್ಲಿ ಗೋವಾ ಕೂಡ ಇದೆ.
ಟಾಕ್ಸಿಕ್ ಸಿನಿಮಾದ ಬಗ್ಗೆ ಯಾವುದೇ ಅಪ್ ಡೇಟ್ ನೀಡದ ಯಶ್ ಮೊನ್ನೆಯಷ್ಟೇ ಈ ಕುರಿತಂತೆ ಮಾತನಾಡಿದ್ದರು. ತಮ್ಮ 19ನೇ ಸಿನಿಮಾದ ಪ್ರಾಜೆಕ್ಟ್ ಎಲ್ಲಿಗೆ ಬಂತು? ಅವರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದರು. ನಿರ್ದೇಶಕ ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ, ಕೆವಿಎನ್ ಸಂಸ್ಥೆ ಜೊತೆ ಯಶ್ ಕೈಜೋಡಿಸಿದ್ದಾರೆ.
ಟಾಕ್ಸಿಕ್’ (ಟಾಕ್ಸಿಕ್) ಶೂಟಿಂಗ್ ಇಷ್ಟರಲ್ಲಿ ಶುರು ಆಗಲಿದೆ. ದೊಡ್ಡ ಮಟ್ಟದ ಯೋಜನೆ ನಡೀತಿದೆ. ‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಕಾಂಪ್ರಮೈಸ್ ಇಲ್ಲದೇ ಇರುವ ಸಿನಿಮಾ ಆಗಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಯಶ್ ಹೇಳಿದ್ದಾರೆ.
ಇಂದು ಕನ್ನಡ ಸಿನಿಮಾರಂಗವನ್ನು ಪರಭಾಷಿಗರು ನೋಡುತ್ತಿರುವ ರೀತಿ ಬಗ್ಗೆ ಯಶ್ ಪ್ರತಿಕ್ರಿಯಿಸಿದ್ದಾರೆ, ಹೌದು ಇಂದು ಬೇರೇ ಚಿತ್ರರಂಗದವರು ನಮ್ಮನ್ನು ನೋಡುವ ರೀತಿ ಬದಲಾಗಿದೆ. ನನ್ನಿಂದ ಕನ್ನಡ ಚಿತ್ರರಂಗ ಅಲ್ಲ. ಚಿತ್ರರಂಗಕ್ಕಾಗಿ ನಾನು ಏನು ಮಾಡ್ಬೇಕು ಅಂತಾ ಸದಾ ಯೋಚನೆ ಮಾಡ್ತಿದ್ದೀನಿ. ಹೊಸ ಹೀರೋಗಳಿಗೆ ಬೆಂಬಲಿಸಿ. 4 ಜನ ಹೀರೋಗಳಿಗಷ್ಟೇ ಸಿನಿಮಾ ಮಾಡಿ ಅಂತಾ ಹೇಳೋದಿಲ್ಲ. ಮಾಡಿರುವ ಸಿನಿಮಾಗಳೆಲ್ಲ ಹಿಟ್ ಆಗಲ್ಲ. ಬರುತ್ತಿರುವ ಸಿನಿಮಾಗಳಿಗೆ ಸಪೋರ್ಟ್ ಮಾಡಿ ಎಂದು ಯಶ್ ಹೇಳಿದ್ದಾರೆ.
ಚಾನೆಲ್ ಸ್ಯಾಟಲೈಟ್ ರೈಟ್ಸ್ ತಗೋಬೇಕು. ಆಗ ಸಿನಿಮಾಗಳ ಸಂಖ್ಯೆ ಜಾಸ್ತಿ ಆಗುತ್ತದೆ. ಚಿತ್ರರಂಗದವರು ನೆಗೆಟಿವ್ ಆಗಿ ಥಿಂಕ್ ಮಾಡಬೇಡಿ. ಪ್ರಶಾಂತ್ ನೀಲ್ ‘ಉಗ್ರಂ’ ಸಿನಿಮಾ ಮಾಡಿದರೂ ಯಾರೂ ಸ್ಯಾಟಲೈಟ್ ರೈಟ್ಸ್ ತೆಗೆದುಕೊಂಡಿಲ್ಲ. ರಿಲೀಸ್ ಆದ್ಮೇಲೆ ಎಲ್ಲಾ ಆ ಚಿತ್ರದ ಮಾತನಾಡಿದ್ದರು. ಪ್ರತಿಭೆ ಇರೋರನ್ನು ಬೆಳೆಸಿ, ಹೊಸ ಸಿನಿಮಾಗಳಿಗೆ ಪ್ರೋತ್ಸಾಹ ನೀಡಿ ಎಂದು ಯಶ್ ಮನವಿ ಮಾಡಿದರು.
,