ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದ್ದು, ದೇಶದ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಮುನ್ಸೂಚನೆ ಇದೆ.
ಮುಂದಿನ ಎರಡು ದಿನಗಳ ಕಾಲ ದೆಹಲಿ, ಪಂಜಾಬ್, ಹರ್ಯಾಣ, ಚಂಡೀಗಢ, ರಾಜಸ್ಥಾನ ಹಾಗೂ ಉತ್ತರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್ನಲ್ಲಿ ಗುಡುಗು, ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
ಶುಕ್ರವಾರದವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.
ಕಲಬುರಗಿಯಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 19.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸೆಕೆ ಹೆಚ್ಚಲಿದೆ.
ಎಚ್ಎಎಲ್ನಲ್ಲಿ 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.