ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ) ಗ್ರಾಮಾಂತರ ಪೊಲೀಸ್ ಠಾಣೆಯ 7ನೇ ತರಗತಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾದ ಕುರಿತು ಪ್ರಕರಣ ದಾಖಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
7ನೇ ತರಗತಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾದ ಕುರಿತು ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಂಬಂಧಿ ಯುವಕನೇ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದ್ದು, ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತೆಯ ಸ್ಥಿತಿಯನ್ನು ನೋಡಿ ಕಡ್ಡಾಯವಾಗಿ ಕಂಗಾಲಾಗಿದ್ದಾರೆ.
ಇದೀಗ ಬಾಲಕಿಯನ್ನ ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಸೇರ್ಪಡೆಗೊಂಡಿದ್ದು, ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಈ ಪ್ರಕರಣ ಬೆಳಕಿಗೆ ಬಂದಿದೆ.
9ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಗರ್ಭಿಣಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಗರ್ಭಿಣಿಯಾದ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ಕಳೆದ ಜ.11 ರಂದು ನಡೆದಿತ್ತು. ಹಾಸ್ಟೆಲ್ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತುಗೊಳಿಸಲಾಗಿದೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಸರ್ಕಾರಿ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.
ಆದರೆ, ಏಳು ತಿಂಗಳ ಗರ್ಭಿಣಿ, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಬಾಗೇಪಲ್ಲಿ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿತ್ತು . ಆಸ್ಪತ್ರೆ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಆಸ್ಪತ್ರೆ ವಾರ್ಡನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಐಒ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.