ಕೊರಟಗೆರೆ : ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮವಾಗಿ ಎರಡು ಬಸ್ಸುಗಳಲ್ಲಿ ಇದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ನಡೆದಿದ್ದು, ಗಾಯಾಳುಗಳಿಗೆ ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊರಟಗೆರೆ ವ್ಯಾಪ್ತಿಯ ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನ ನಡೆಸಿ ಪ್ರಕರಣವನ್ನು ದಾಖಲಿಸಿದ್ದಾರೆ.