ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ವ್ಯಕ್ತಿಯೊಬ್ಬರು (Road Accident) ಬಲಿಯಾಗಿದ್ದಾರೆ. ಅತಿ ವೇಗವಾಗಿ ಬಂದ ಬಸ್ ವ್ಯಕ್ತಿಗೆ ಡಿಕ್ಕಿ (Killer Bmtc) ಹೊಡೆದಿದೆ. ಡಿಕ್ಕಿ ರಭಸಕ್ಕೆ ಚೇತನ್ (35) ಎಂಬುವವರು ದಾರುಣವಾಗಿ ಮೃತಪಟ್ಟಿದ್ದಾರೆ.
ಆಂಧ್ರ ಮೂಲದ ಚೇತನ್ ರಸ್ತೆ ದಾಟುತ್ತಿದ್ದರು. ಈ ವೇಳೆ ಕಾಮಾಕ್ಷಿಪಾಳ್ಯ ಸಮೀಪದ ಹೌಸಿಂಗ್ ಬೋರ್ಡ್ನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಚೇತನ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಚೇತನ್ ಕೈ ಮೇಲೆ ಬಸ್ ಹರಿದಿದೆ. ಇದೇ ವೇಳೆ ತಲೆಗೂ ತೀವ್ರ ಪೆಟ್ಟಾಗಿತ್ತು. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಬಿಎಂಟಿಸಿ ಬಸ್ ಚಾಲಕ ಶಿವಕುಮಾರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಬಿಎಂಟಿಸಿ ಬಸ್ ಅನ್ನು ಸೀಜ್ ಮಾಡಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
.