ನವದೆಹಲಿ: ಹೊಸದಾಗಿ ನೇಮಕಗೊಂಡ ಇಬ್ಬರು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಡಾ. ಸುಖ್ಬೀರ್ ಸಿಂಗ್ ಸಂಧು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಶುಕ್ರವಾರ ಆಯೋಗಕ್ಕೆ ಸೇರ್ಪಡೆಯಾದ ಇಬ್ಬರು ನೂತನ ಚುನಾವಣಾ ಆಯುಕ್ತರನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ವಾಗತಿಸಿದರು ಎಂದು ಚುನಾವಣಾ ಸಂಸ್ಥೆಯ ವಕ್ತಾರರು. ಇದನ್ನೂ ಓದಿ: ಚುನಾವಣಾ ಆಯೋಗದ ಆಯುಕ್ತರಾಗಿ ಇಬ್ಬರನ್ನು ನೇಮಿಸಲಾಗಿದೆ. ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತ (CEC) ಮತ್ತು ಚುನಾವಣಾ ಆಯುಕ್ತರ (EC) ನೇಮಕಾತಿಗೆ ಹೊಸ ಕಾನೂನು ಜಾರಿಗೆ ಬಂದ ನಂತರ ಅವರು ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡರು.
ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ನಿವೃತ್ತಿ ಮತ್ತು ಮಾರ್ಚ್ 8 ರಂದು ಅರುಣ್ ಗೋಯಲ್ ಅವರು ಹಠಾತ್ ರಾಜೀನಾಮೆ ನೀಡಿದ ನಂತರ ಚುನಾವಣಾ ಆಯೋಗದ ಖಾಲಿ ಹುದ್ದೆಗಳಿಗೆ ನೇಮಕಗೊಂಡರು. 1988ರ ಬ್ಯಾಚ್‌ನ IAS ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸಂಧು ಕ್ರಮವಾಗಿ ಕೇರಳ ಮತ್ತು ಉತ್ತರಾಖಂಡ್ ಕೇಡರ್‌ಗೆ ಸೇರಿದವರು.