ಶಿವಮೊಗ್ಗ: ಹಾವೇರಿ-ಗದಗ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದ ಹಿನ್ನಲೆ ಬಿ.ಎಸ್ ಯಡಿಯೂರಪ್ಪ ವಿರುದ್ಧ ರೊಚ್ಚಿಗೆದ್ದಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ಈಶ್ವರಪ್ಪ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಗೆದ್ದ ನಂತರ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ತಿಳಳಿಸಿದ್ದಾರೆ.