ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ಸಿ ‘ಮೋಟಾರು ವಾಹನ ನಿರೀಕ್ಷಕರು’ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಸಾರಿಗೆ ಇಲಾಖೆ
ಹುದ್ದೆ ಹೆಸರು : ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಸಂಖ್ಯೆ : 76 ಹುದ್ದೆಗಳ ವಿಂಗಡಣೆ
ಮೋಟಾರು ವಾಹನ ನಿರೀಕ್ಷಕರು (ಉಳಿಕೆ ಮೂಲ ವೃಂದ) : 70
ಮೋಟಾರು ವಾಹನ ನಿರೀಕ್ಷಕರು (ಹೈದರಾಬಾದ್ ಕರ್ನಾಟಕ) : 6
ಸಾರಿಗೆ ಇಲಾಖೆ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ವಿದ್ಯಾರ್ಹತೆ
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು. ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮ (3 ವರ್ಷ) ಪಾಸ್ ಮಾಡಿರಬೇಕು ಅಥವಾ
ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಾಸ್ ಮಾಡಿರಬೇಕು. ಅಥವಾ
ಬಿ.ಟೆಕ್ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಬಿ.ಟೆಕ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದು.
ಚಾಲನ ಪರವಾನಗಿ ಹೊಂದಿರಬೇಕು. ಇತರೆ ಅರ್ಹತೆಗಳಾಗಿ ಅಧಿಸೂಚನೆಯಲ್ಲಿ ತಿಳಿಸಿರುವ ದೈಹಿಕ ಸಾಮರ್ಥ್ಯ ಅರ್ಹತೆಗಳನ್ನು ಹೊಂದಿರಬೇಕು.
ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆ
ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿಗೆ ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 22-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-05-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21-05-2024
ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿ ಶುಲ್ಕ ವಿವರ
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
– ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
– ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
– ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್ ರೂ.35 ಪಾವತಿಸಬೇಕು.
ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ವೇತನ ಶ್ರೇಣಿ : ರೂ.33,450 – 62,600 ವರೆಗೆ ಇರುತ್ತದೆ.