ಕರ್ನಾಟಕ ಲೋಕಸೇವಾ ಆಯೋಗವು : ವಿವಿಧ ಇಲಾಖೆಯಲ್ಲಿನ ಪದವಿ ಅರ್ಹತೆಯ ಗ್ರೂಪ್ ಸಿ ಹುದ್ದೆಗಳಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಿದೆ. ಯಾವ ಇಲಾಖೆಯ ಹುದ್ದೆಗಳಿವು ಎಂದು, ಹಾಗೂ ಇತರೆ ಮಾಹಿತಿಗಳನ್ನು ಕೆಳಗಿನಂತೆ ಓದಿ ತಿಳಿಯಿರಿ.
ಕೆ.ಪಿ.ಎಸ್.ಸಿ’ಯು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ವಿಸ್ತಾರಣಾಧಿಕಾರಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಪಾಲಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆವಾರು ವಿದ್ಯಾರ್ಹತೆ ವಿವರ : ಉದ್ಯೋಗ ಇಲಾಖೆ ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ , ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ವಿಸ್ತರಣಾಧಿಕಾರಿ 50 RPC + 13, ಸಾರ್ವಜನಿಕ ಗ್ರಂಥಾಲಯ ಇಲಾಖೆ ಗ್ರಂಥಪಾಲಕ 10 RPC + 03
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ವಿಸ್ತಾರಣಾಧಿಕಾರಿ : ವಿಜ್ಞಾನ ಅಥವಾ ಕಾಮರ್ಸ್ ಅಥವಾ ಬ್ಯುಸಿನೆಸ್ ಡಿಗ್ರಿ ಅಥವಾ ಯಾವುದೇ ಇಂಜಿನಿಯರಿಂಗ್ ಪದವಿ. ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಪಾಲಕ : ಲೈಬ್ರರಿ ಸೈನ್ಸ್ ಪದವಿ ಪಡೆದಿರಬೇಕು.
ಹುದ್ದೆವಾರು ವೇತನ ವಿವರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ವಿಸ್ತಾರಣಾಧಿಕಾರಿ ವೇತನ ಶ್ರೇಣಿ Rs.33,450 – 62,600. ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಪಾಲಕ ವೇತನ ಶ್ರೇಣಿ Rs.37,900 – 70,850.
ವಯಸ್ಸಿನ ಅರ್ಹತೆ. ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಪ್ರಮುಖ ದಿನಾಂಕಗಳು : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 29-04-2024 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-05-2024. ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 28-05-2024 ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.
ಅರ್ಜಿ ಶುಲ್ಕ ವಿವರ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600. ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ನೇಮಕಾತಿ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಲಿಂಕ್ ಅನ್ನು ಏಪ್ರಿಲ್ 29 ರಂದು ಬಿಡುಗಡೆ ಮಾಡಲಿದ್ದು, ಅಷ್ಟರೊಳಗೆ ಅಭ್ಯರ್ಥಿಗಳು ಅರ್ಜಿಗೆ ಬೇಕಾದ ಸಿದ್ಧತೆ ನಡೆಸಿಕೊಳ್ಳಿ. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಆರಂಭಿಸಿ.