ನೆಲಮಂಗಲ : ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಏಳು ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳುವಲ್ಲಿ ನಗರ ಪೊಲೀಸ್ ಠಾಣೆ ಪೋಲೀಸರು ಯಶಸ್ವಿಯಾಗಿದ್ದಾರೆ.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದಂತೆ ದೇಶದಲ್ಲಿ ನೀತಿ ಸಮಿತಿ ಜಾರಿಯಾಗಿದ್ದು , ಹಣ , ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಪೊಲೀಸರು ಕಡಿಮಣ ಹಾಕಲಿದ್ದಾರೆ. ಅದರಂತೆ ನೀತಿ ಸಮಿತಿ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸ್ ಕಾರ್ಯಾಚರಣೆ ತಿಳಿದಿದ್ದು ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ನಗರದ ಜಾಸ್ ಟೋಲ್ ಬಳಿಯ ಚೆಕ್ ಪೋಸ್ಟ್ ನಲ್ಲಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 16 ರಾತ್ರಿ 9:00 ವೇಳೆ ತಮಿಳುನಾಡಿನ ಉದ್ಯಮಿ ರಘುಪತಿ ಎಂಬತ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಪೊಲೀಸರು ಜಪ್ತಿ ಮಾಡಿದ್ದಾರೆ. ಉದ್ಯಮಿ ರಘುಪತಿ, ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ತೆರಳುತ್ತಿದ್ದರು ಉದ್ಯಮಿಯನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.