ಬೆಂಗಳೂರು, (ಮಾರ್ಚ್ 21): ನಮ್ಮ ಮೆಟ್ರೋ ಟ್ರಾಕ್ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಎಂದು ತಿಳಿದಿದ್ದಾರೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ. ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ.
ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಾರಣಕ್ಕೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಮಾರ್ಚ್ 21 ರ ಮಧ್ಯಾಹ್ನ 2:10 ರ ಸುಮಾರಿಗೆ ಹಳಿಗೆ ಹಾರಿದ್ದಾನೆ. ಈ ಬಗ್ಗೆ ಬಿಎಂಆರ್ಸಿಎಲ್ ಎಕ್ಸ್ ಮೂಲಕ. ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ, ಮಾಗಡಿ ರಸ್ತೆಯಿಂದ ವೈಟ್ ಫೀಲ್ಡ್ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಹಾಗೂ ಬಿಎಂಆರ್ಸಿ ಹಿರಿಯ ಅಧಿಕಾರಿಗಳ ಭೇಟಿ.
ಮೆಟ್ರೋ ಬರುತ್ತಿದ್ದುದನ್ನು ಗಮನಿಸಿದ ವ್ಯಕ್ತಿ ಸಂಚಾರಕ್ಕೆ ಹಾರಿದ್ದಾನೆ. ಪರಿಣಾಮ ಮೆಟ್ರೋಗೆ ಸಿಲುಕಿಕೊಂಡಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬೆಂಗಳೂರು ವಿಭಾಗದ ಡಿಸಿಪಿ ಗಿರೀಶ್ .ಎಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಬಗ್ಗೆ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.
ಇದೇ ಮೊದಲ ಸಾವು ಈ ರೀತಿ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಮೊದಲ ಪ್ರಕರಣವಾಗಿದೆ. ಈ ಹಿಂದೆ ಹಳಿ ಮೇಲೆ ಜಿಗಿದಿರು ಪ್ರಕರಣಗಳು ನಡೆದಿದ್ದವು. ಆದರೆ, ಯಾವುದೇ ಸಾವು-ನೋವು ಆಗಲಿಲ್ಲ.