Breaking
Tue. Dec 24th, 2024

ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಡಿ.ಹೆಚ್.ಓ ಸುನೀಲ್ ಕುಮಾರ್ ಕಿರುಕುಳ ನೀಡಿದ ಆರೋಪ..!

ಬೆಂಗಳೂರಿನಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣದ ನಂತರ ರಾಜ್ಯದ ವಿವಿಧ ಕಡೆಗಳಲ್ಲಿ ಸಾಲು ಸಾಲು ಪ್ರಕರಣಗಳು ಬಂದವು. ಈ ಪೈಕಿ ಹೊಸಕೋಟೆ, ನೆಲಮಂಗಲದಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣಗಳು ಕೂಡ ಸೇರಿವೆ. ಆದರೆ, ಈ ಎರಡು ಕಡೆಗಳಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಡಿ.ಹೆಚ್.ಓ ಸುನೀಲ್ ಕುಮಾರ್ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. 

ಹೊಸಕೋಟೆ ಮತ್ತು ನೆಮಂಗಲದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರು ಬಯಲು ಮಾಡಿದ್ದರು. ಆದರೆ, ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್, ಜಿಲ್ಲೆಯ ಮತ್ತಷ್ಟು ಆಸ್ವತ್ರೆಗಳ ಲೋಪದೋಷ ಹಾಗೂ ಗರ್ಭಪಾತ ಕರ್ಮಕಾಂಡದ ಬಗ್ಗೆ ಬಯಲು ಮಾಡದಂತೆ ಮಂಜುನಾಥ್ ಅವರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ.

ಮೂರು ದಿನಗಳಿಗೊಮ್ಮೆ ನೋಟಿಸ್ ನೀಡುತ್ತಾ ಆಸ್ವತ್ರೆಗಳ ಲೋಪದೋಷ ವರದಿ ನೀಡದಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಂಜುನಾಥ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ನೆಲಮಂಗಲದ ಆಸರೆ ಆಸ್ವತ್ರೆಯ 74 ಗರ್ಭಪಾತದ ವರದಿ ಮಾಡದಂತೆ ಸುನೀಲ್ ಕುಮಾರ್ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. 

ಒತ್ತಡದ ನಡುವೆಯು ಆಸ್ವತ್ರೆಯ ಕರ್ಮಕಾಂಡ ಬಯಲು ಮಾಡಿ ಕೇಸ್ ದಾಖಲಿಸಿದಕ್ಕೆ ಮಂಜುನಾಥ್ ಅವರಿಗೆ ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೆ, ಮಂಜುನಾಥ್ ಅವರು ಹೊಸಕೋಟೆಯ ಓವಂ ಆಸ್ವತ್ರೆಯಲ್ಲೂ MTP ಖಾಯ್ದೆಯಡಿ ಅನುಮತಿ ಪಡೆಯದೆ ಗರ್ಭಪಾತ ಪ್ರಕರಣ ಪತ್ತೆ ಮಾಡಿದ್ದಾರೆ. ಈ ಬಗ್ಗೆ ವರದಿ ಮಾಡಿ ಬಯಲು ಮಾಡದಂತೆ ಡಿಹೆಚ್ಒ ಸುನೀಲ್ ಅವರು ಕಿರುಕುಳ ನೀಡಿದ್ದಾಗಿ ಪತ್ರದಲ್ಲಿ ಆರೋಪಿಸಲಾಗಿದೆ.

DHO ಮಾತು ಕೇಳದಕ್ಕೆ ವಿನಾಕಾರಣ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದಾಗಿ ಮಾನಸಿಕ ಸ್ಥೀಮಿತ ಕಳೆದುಕೊಂಡು ಜೀವ ಕಳೆದುಕೊಂಡರೆ ಡಿಹೆಚ್ಒ ಕಾರಣ ಅಂತ ಪತ್ರದಲ್ಲಿ ಮಂಜುನಾಥ್ ಉಲ್ಲೇಖಿಸಿದ್ದಾರೆ.

Related Post

Leave a Reply

Your email address will not be published. Required fields are marked *