ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಇದರಲ್ಲೇ ಇ.ಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಇ.ಡಿ.ಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ ಇದೆ.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎಂಟು ಸಮನ್ಸ್‌ಗಳಿಗೆ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯೆ ಇಲ್ಲ.
ಒಂಬತ್ತು ಬಾರಿ ಇ.ಡಿ ಸಮನ್ಸ್ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಲಾಗಿದೆ.