ಯಾದಗಿರಿ : ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ (ರಾಜಾ ವೆಂಕಟಪ್ಪ ನಾಯಕ್) ನಿಧನದಿಂದ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಶಾಸಕರಾದ ದಿವಂಗತ ರಾಜಾ ವೆಂಕಟಪ್ಪ ನಾಯಕರ ಪುತ್ರ ರಾಜಾ ವೇಣುಗೋಪಾಲ ನಾಯಕಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೂಲಕ ದಿವಂಗತ ರಾಜಾ ವೆಂಕಟಪ್ಪ ನಾಯಕ ಕುಟುಂಬಕ್ಕೆ ಮತ್ತೊಮ್ಮೆ ಮಣೆ ಹಾಕಿದೆ. ಅನುಕಂಪದ ಆಧಾರದಲ್ಲಿ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ (ಕಾಂಗ್ರೆಸ್) ಪಕ್ಷವಿದೆ.
ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಚುನಾವಣಾ ಆಯೋಗ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯ ಎರಡನೇ ಮತದಾನದ ವೇಳೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 3 ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಕರ್ನಾಟಕದ 17 ಅಭ್ಯರ್ಥಿಗಳು ಸೇರಿ 57 ಹುರಿಯಾಳುಗಳನ್ನು ಅಖೈರುಗೊಳಿಸಿದ್ದಾರೆ.