Breaking
Tue. Dec 24th, 2024

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಬಿಜೆಪಿ ಹಾಲಿ ಸಂಸದ ಜಿ.ಎಂ ಸಿದ್ದೇಶ್ವರ್ ಕುಟುಂಬ ಜಿದ್ದಾ – ಜಿದ್ದಿನಾ ಸ್ಪರ್ಧೆ..!

ದಾವಣಗೆರೆ : ಮಧ್ಯ ಕರ್ನಾಟಕದ ದಾವಣಗೆರೆ ಲೋಕಸಭಾ ಕ್ಷೇತ್ರ ಈ ಬಾರಿ ಮತ್ತೊಮ್ಮೆ ಜಿದ್ದಾಜಿದ್ದಿನ ಕಣವಾಗಿದೆ. ಇದ್ದಕ್ಕೆ ಮುಖ್ಯ ಕಾರಣ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಬಿಜೆಪಿ ಹಾಲಿ ಸಂಸದ ಜಿ.ಎಂ ಸಿದ್ದೇಶ್ವರ್ ಕುಟುಂಬ ಎದುರಾಳಿಗಳಾಗಿದ್ದಾರೆ.

ಈ ಬಾರಿ ದಾವಣಗೆರೆಯಲ್ಲಿ ಮೊದಲ ಬಾರಿ ಬಿಜೆಪಿ ಮಹಿಳಾ ಅಭ್ಯರ್ಥಿಯಾಗಿ ಜಿ.ಎಂ.ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಕಣಕ್ಕೆ ಇಳಿಸಿದೆ. ಇದಕ್ಕೆ ಕಾಂಗ್ರೆಸ್ ಕೂಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪತ್ನಿ, ಶಾಮನೂರು ಶಿವಶಂಕರಪ್ಪ ಸೊಸೆಯಾದ ಪ್ರಭಾ ಮಲ್ಲಿಕಾರ್ಜುನಗೆ ಟಿಕೆಟ್ ನೀಡಿದ್ದಾರೆ. ಇದೇ ಮೊದಲ ಬಾರಿ ಮಹಿಳೆಯರ ನಡುವಿನ ಸ್ಪರ್ಧೆ ತೀವ್ರ ಕುತೂಹಲ ಮೂಡಿಸಿದೆ.

ಎರಡು ಕುಟುಂಬಗಳ ನಡುವೆ ನೇರ ಸ್ಫರ್ಧೆ. ಈ ಕ್ಷೇತ್ರದಲ್ಲಿ ಹಾಲಿ ಸಂಸದ ಜಿ.ಎಂ ಸಿದ್ದೇಶ್ವರ ಸತತ ನಾಲ್ಕು ಬಾರಿ ಸಂಸದರಾಗಿದ್ದಾರೆ. ಇನ್ನೂ ಅವರ ತಂದೆ ಸಹ ಎರಡು ಬಾರಿ ಆಯ್ಕೆ, ಕ್ಷೇತ್ರದಲ್ಲಿ ಬಿಜೆಪಿ ಹೋಲ್ಡಿಂಗ್ ಗಟ್ಟಿಯಾಗುವುದು. ಇನ್ನೂ ಶಾಮನೂರು ಶಿವಶಂಕರಪ್ಪ ಕುಟುಂಬ ಸಹ ದಾವಣಗೆರೆಯಲ್ಲಿ ಬಿಗಿ ಹಿಡಿತ. ಹೀಗಾಗಿ ದಾವಣಗೆರೆ ಈ ಬಾರಿಯ ಚುನಾವಣೆ ಎರಡು ಕುಟುಂಬದ ಪ್ರತಿಷ್ಠಿತ ಕಣ.

ಶಾಮನೂರು ಕುಟುಂಬ ಮತ್ತು ಜಿ.ಎಂ ಸಿದ್ದೇಶ್ವರ ಕುಟುಂಬ ಇದಕ್ಕೂ ಮುನ್ನ ಸಾಕಷ್ಟು ಬಾರಿ ಎದುರಾಳಿಗಳಾಗಿದ್ದರೂ ಅಲ್ಲಿ ಜಿ.ಎಂ ಸಿದ್ದೇಶ್ವರ ಗೆಲುವು ಸಾಧಿಸಿದ್ದಾರೆ. ಇದೀಗ ಮತ್ತೊಮ್ಮೆ ಎರಡು ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಮನ್ನಣೆ. ಇದರ ವಿರುದ್ಧ ಬಿಜೆಪಿಯಲ್ಲಿ ಬಂಡಾಯದ ಗಾಳಿ ಜೀರಾಗಿ ಬೀಸುತ್ತಿದೆ. ಕಾಂಗ್ರೆಸ್ ನಲ್ಲಿಯೂ ಸಹ ಬಂಡಾಯ ಜೋರಾಗಿದೆ. 

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷೆಯಂತೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಅವರಿಗೆ ಬಿಜೆಪಿಯು ಅಚ್ಚರಿಯ ಅಭ್ಯರ್ಥಿಯಾಗಿ ಕಳೆದ ವಾರ ಟಿಕೆಟ್ ನೀಡಿದ ಅವರ ಎದುರಾಳಿ ಯಾರಾಗಬಹುದು ಎಂಬ ಕುತೂಹಲ ಮತದಾರರಲ್ಲಿ ಮನೆ ಮಾಡಿತ್ತು. 

ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್‌ ನೀಡಿದ್ದಾರೆ. ಈ ಕಾಂಗ್ರೆಸ್ ನಲ್ಲಿ ಪ್ರಭಾರ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯುವ ಮುಖಂಡ ಜಿ.ಬಿ. ವಿನಯಕುಮಾರ್ ಅವರು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿನಯಕುಮಾರ್ ಕ್ಷೇತ್ರದಲ್ಲಿ ಸಾಕಷ್ಟು ಜನರ ಸಮಸ್ಯೆ ಆಲಿಸಿದ್ದರು. ಯುವಕರನ್ನು ಸೆಳೆದುಕೊಂಡು ಕಳೆದ ಆರು ತಿಂಗಳಿಂದ ಪಾದಯಾತ್ರೆ ನಡೆಸಿದ್ದರು. ಎರಡೂ ಪಕ್ಷಗಳ ನಡುವೆ ಬಂಡಾಯದ ಬಿಸಿ ಜೋರಾಗಿದೆ. ಕ್ಷೇತ್ರದಲ್ಲಿ ಎರಡು ಕುಟುಂಬದ ನಡುವೆ ನೇರ ಸ್ಪರ್ಧೆ ಏರ್ಪಟ್ಟರೂ, ಬಂಡಾಯ ಅಭ್ಯರ್ಥಿಗಳು ಕಣದಲ್ಲಿ ಉಳಿದರೆ ಚತುಷ್ಕೋನ ಸ್ಪರ್ಧೆಗೆ ಎದುರಾಗಲಿದೆ.

Related Post

Leave a Reply

Your email address will not be published. Required fields are marked *