ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳ ಸಂಖ್ಯೆ 20286 ಮತ್ತು ಸ್ಥಳೀಯ ವೃಂದದ 199, ಹಾಗೂ 15 ಹುದ್ದೆಗಳು ಬಾಕಿ ಸೇರಿ ಒಟ್ಟು 200500 ಹುದ್ದೆಗಳಿಗೆ ಮಾರ್ಚ್ 10 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ತರಗತಿ ಪೂರ್ಣಗೊಳಿಸಿರಬೇಕು ಮಾನ್ಯತೆ ಹೊಂದಿರುವ ಮೋಟರ್ ವಾಹನ ನಿರ್ವಾಹಕ ಪರವಾನಿಗೆ ಬ್ಯಾಡ್ಜ್ ಹೊಂದಿರಬೇಕು.
ವಯಾಮಿತಿ : ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35 ವರ್ಷ 2a, 2b, 3a ಮತ್ತು 3b 38 ವರ್ಷ, ಎಸ್ಸಿ ಎಸ್ಟಿ ಮತ್ತು ಪ್ರವರ್ಗ 1 ಕ್ಕೆ 40 ವರ್ಷ, ಮಾಜಿ ಸೈನಿಕ ಇಲಾಖೆ ಅಭ್ಯರ್ಥಿಗಳಿಗೆ 45 ವರ್ಷ. ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷದಿಂದ 35 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪವರ್ಗ, ಪ್ರವರ್ಗ 1 , ಮಾಜಿ ಸೈನಿಕರು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 10-3-2024 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 4-4-2024
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ ಅನ್ನು ಸಂಪರ್ಕಿಸಿ : https://kea.kar.nic.in