ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಕೂಡ ಕಂಡುಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ, ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣಾ ಕಣಕ್ಕಿಳಿದಿದೆ.
ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಇದುವರೆಗೂ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ, ಜೆಡಿಎಸ್ 1 ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಇನ್ನು, ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆಯಾಗದಿದ್ದರೂ ಬಿಜೆಪಿ 5 ಹಾಗೂ ಜೆಡಿಎಸ್ 2 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಬೇಕಿದೆ. ಕಾಂಗ್ರೆಸ್ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿಯಿದೆ. ಯಾವ ಕ್ಷೇತ್ರದಲ್ಲಿ ಯಾರು ಎದುರಾಳಿ? ಯಾರೆಲ್ಲಾ ಇದ್ದಾರೆ ಎಂಬ ಮಾಹಿತಿ ಇಲ್ಲಿದೆ.