ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.1.50 ಲಕ್ಷ ಹಣವನ್ನು ತುರುವನೂರು ಹೋಬಳಿ ಚೆಕ್‌ಪೋಸ್ಟ್ ನಲ್ಲಿ ಶನಿವಾರ ವಶಕ್ಕೆ ಪಡೆಯಲಾಗಿದೆ.
ಎಫ್‍ಎಸ್‍ಟಿ ತಂಡದ ಮುಖ್ಯಸ್ಥ ಟಿ.ಕೆ.ಸಂತೋಷ್ ಕುಮಾರ್ ಅವರು ತುರುವನೂರು ಹೋಬಳಿ ಚೆಕ್ ಪೋಸ್ಟ್ ನಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಹನಗಳನ್ನು ಪರಿಶೀಲನೆ ಮಾಡುವಾಗ ಕೊಪ್ಪಳದ ಇರ್ಪಾನ್ ಶೇಕ್ ಬಿನ್ ದಾದಾಪೀರ್ ಎಂಬುವರು ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ರೂ. 1.50 ಲಕ್ಷ ಹಣವನ್ನು ಎಫ್‍ಎಸ್‍ಟಿ ತಂಡ ತಪಾಸಣೆ ನಡೆಸಿ, ಹಣ ವಶಪಡಿಸಿಕೊಂಡಿದೆ.
ಜಪ್ತಿ ಪಡಿಸಿಕೊಂಡ ಹಣವನ್ನು ನಗದು ವಶಪಡಿಸಿಕೊಳ್ಳುವ ಪರಿಹಾರ ಸಮಿತಿ ಗಮನಕ್ಕೆ ತಂದಿದ್ದು, ಈ ಹಣವನ್ನು ಚಳ್ಳಕೆರೆಯ ಉಪ ಖಜಾನೆಯ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್ ತಿಳಿಸಿದ್ದಾರೆ.