ಕಡೂರು : ಪ್ರಯಾಣಿಕರಿಂದ ತುಂಬಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.
ಕಡೂರಿನ ಅಂಚೆ ಚೋಮನಹಳ್ಳಿ ಬಳಿಯ ಸ್ಕೈ ವಾಕರ್ ಪಿಲ್ಲರಿಗೆ ಬಸ್ ಡಿಕ್ಕಿ ಹೊಡೆದು ನಿಂತಿದೆ. ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿದ್ದ 5 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸ್ ಕಡೂರಿನಿಂದ ಅರಸೀಕೆರೆಗೆ ಪ್ರಯಾಣಿಕರನ್ನು ತುಂಬಿಕೊಂಡು ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.