ಚಿತ್ರದುರ್ಗ, ಮಾರ್ಚ್.24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುಜಾತ. ಡಿ ಅವರನ್ನು ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷದಿಂದ ಕಣಕ್ಕಿಳಿಸಲಾಗಿದೆ ಎಂದು ರಾಜ್ಯ ಮುಖಂಡರಾದ ಎಂ.ಎನ್. ಮಂಜುಳಾ ಅವರು ತಿಳಿಸಿದರು.
2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದೆ. ದೇಶದ 19 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಹೇಳಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುಜಾತ. ಡಿ ಪರಿಚಯ :ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಧರರಾದ ಇವರು ಮಹಿಳಾ-ಯುವಜನ ಹೋರಾಟಗಳಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ಚಿತ್ರದುರ್ಗ ಸ್ಥಳೀಯ ಸಮಿತಿ ಸದಸ್ಯರಾದ ಇವರು ಪಕ್ಷದ ಮಹಿಳಾ ಮುಂದಳವಾದ ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ (ಎಐಎಂಎಸ್‍ಎಸ್)ಯ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ತೊಡಗಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಪಕ್ಷ ಹಾಗೂ ಎಐಎಂಎಸ್‍ಎಸ್ ಸಂಘಟಿಸಿದ ಜನಪರ ಹೋರಾಟಗಳಲ್ಲಿ ಹಾಗೂ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ರವಿಕುಮಾರ್ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.