ಶಿವಮೊಗ್ಗ : ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಶಿವಮೊಗ್ಗ ವಿಭಾಗದ ಹೊನ್ನಾಳಿ ಡಿಪೋದಲ್ಲಿ ಬಸವರಾಜ ಕೆಲಸ ಮಾಡುತ್ತಿದ್ದಾರೆ. ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹೊನ್ನಾಳಿ ಘಟಕದಲ್ಲಿ ಕರ್ತವ್ಯ ನಿರತ ಮೆಕಾನಿಕ್ ಕೆ. ರೇಣುಕಾ ಹಾಗೂ ಕೆ.ಎಸ್.ಆರ್.ಟಿ.ಸಿ. ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಹೊನ್ನಾಳಿ ಘಟಕದಲ್ಲಿ ಕುಡಿಯುವ ನೀರಿನ ವಿಷಯಕ್ಕೆ ತಗಾದೆ ತೆಗೆದು ಬಸವರಾಜ್ ಜೊತೆ ರೇಣುಕಾ ಕಿರಿಕ್ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಮಹಿಳಾ ಸಿಬ್ಬಂದಿ ರೇಣುಕಾರನ್ನು ಮುಂದೆ ಇಟ್ಟುಕೊಂಡು ಕಿರುಕುಳ ನೀಡಲಾಗುತ್ತಿದೆ. ಇದಕ್ಕೆಲ್ಲಾ ಶಿವಮೊಗ್ಗ ವಿಭಾಗದ ಅಧಿಕಾರಿಗಳ ಪ್ರಚೋದನೆ ಇದೆ ಎನ್ನಲಾಗಿದೆ.
ಲೈಂಗಿಕ ಕಿರುಕುಳ, ಜಾತಿ ನಿಂದನೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲು ಹುನ್ನಾರ ನಡೆಸಿದ್ದಾರೆ. ನನ್ನ ಸಾವಿಗೆ ರೇಣುಕಾ, ಹಿರಿಯ ಅಧಿಕಾರಿಗಳು ಕಾರಣ ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಅಸ್ವಸ್ಥ ಬಸವರಾಜ್ ಗೆ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಿರೀಕ್ಷಿಸಲಾಗಿದೆ.
ನಿನ್ನೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಷ ಸೇವಿಸಿ ಒದ್ದಾಡುತ್ತಿದ್ದ ಬಸವರಾಜ್‌ನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.