ರಾಯಚೂರು ಮಾರ್ಚ್ 24 : ಯುಟ್ಯೂಬ್ ಕಂಟೆಂಟ್ ಗೋಸ್ಕರವಾಗಿ ಅಪ್ರಾಪ್ತ ಬಾಲಕಿಯೊಬ್ಬಳನ್ನವು ಅಕ್ರಮವಾಗಿ ದತ್ತು ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ ಗೌಡಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜೈಲಿನಲ್ಲೇ ಕಾಲಕಳೆಯುವ ಸ್ಥಿತಿ ಬರುವ ಸಾಧ್ಯತೆ ಇದೆ.
ಮಗುವಿನ ಅಕ್ರಮ ದತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸೋನು ಗೌಡ ಅವರನ್ನು ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಸೋನು ಗೌಡಳನ್ನ ಸಹ ಬಾಡರಳ್ಳಿ ಪೊಲೀಸರು ರಾಯಚೂರು ಜಿಲ್ಲೆಗೆ ಈಗಾಗಲೇ ಕರೆದುಕೊಂಡು ಬಂದಿದ್ದಾರೆ. ಕಾಚಾಪುರ ಗ್ರಾಮಕ್ಕೆ ಸೋನುಗೌಡಳನ್ನ ಕರೆದುಕೊಂಡು ಬಂದು ಮಗುವಿನ ಮನೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ.
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನ ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು.