ಇಬ್ಬರು ಹೈಕೋರ್ಟ್  ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರು  ಸೋಗಿನಲ್ಲಿ ಬೆದರಿಕೆ..!

ಬೆಂಗಳೂರು : ನಿಮ್ಮ ಸಿಮ್ ಕಾರ್ಡ್‌ನಿಂದ ಕಾನೂನುಬಾಹಿರವಾಗಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸಲಾಗಿದೆ ಎಂದು ಇಬ್ಬರು ಹೈಕೋರ್ಟ್  ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರು  ಸೋಗಿನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಕರೆ ಮಾಡಿದ ಸೈಬರ್ ವಂಚಕರು  ನ್ಯಾಯಮೂರ್ತಿಗಳೊಂದಿಗೆ ಏಳು ಧ್ವನಿಯಲ್ಲಿ ಮಾತನಾಡಿದ್ದಾರೆ. ನೀವು ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸಿದ್ದೀರಿ. ನಿಮ್ಮ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ. ಅವರ ಜೊತೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳಿ ಎಂದಿದ್ದರು. ಹಣಕ್ಕೆ ಬೇಡಿಕೆ ಇಟ್ಟಿದ್ದರು. 

ಈ ಸಂಬಂಧ ಉನ್ನತ ಭದ್ರತಾ ಇನ್ಸ್‌ಪೆಕ್ಟರ್‌ಗಳಿಗೆ ನ್ಯಾಯಮೂರ್ತಿಗಳು ದೂರು ನೀಡುವಂತೆ ಸೂಚಿಸಿದ್ದಾರೆ. ನ್ಯಾಯಮೂರ್ತಿಗಳ ನಿರ್ದೇಶನದ ಕಾನೂನು ಭದ್ರತಾ ಪೊಲೀಸ್ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Related Post

Leave a Reply

Your email address will not be published. Required fields are marked *