Breaking
Tue. Dec 24th, 2024

ಸದ್ದಿಲ್ಲದೇ ಮದುವೆಯಾದ ಕಾಲಿವುಡ್ ನಟ ಸಿದ್ದಾರ್ಥ್..!

ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಕಾಲಿವುಡ್ ನಟ ಸಿದ್ಧಾರ್ಥ್ ಸದ್ದಿಲ್ಲದೇ  ಮದುವೆಯಾದ ವಿಚಾರ ಕಾಲಿವುಡ್ ಅಂಗಳದಿಂದ ಬಂದಿದೆ. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ. ಅಧಿಕೃತವಾಗಿ ಈ ಕುರಿತಂತೆ ಜೋಡಿ ಹೇಳಿಕೊಳ್ಳದೇ ಇದ್ದರೂ, ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಆಗಿದೆ. 

ಈ ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದೆ. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (ವಿವಾಹ) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.

ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿತ್ತು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರುವುದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.

2021ರಲ್ಲಿ ‘ಮಹಾ ಸಮುದ್ರಂ’ ಸಿನಿಮಾ ವೇಳೆ, ಅದಿತಿ- ಸಿದ್ಧಾರ್ಥ್ ಪರಿಚಿತರಾದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಸಾಕಷ್ಟು ಪಾರ್ಟಿ ಮತ್ತು ಸೆಲೆಬ್ರಿಟಿ ಮದುವೆ ಸಮಾರಂಭಗಳಲ್ಲಿ ಇಬ್ಬರೂ ಜೊತೆಯಾಗಿಯೇ ಹೋಗುವ ಮೂಲಕ ಹೈಲೆಟ್ ಆದರು. 

Related Post

Leave a Reply

Your email address will not be published. Required fields are marked *