ಬೆಂಗಳೂರು, (ಮಾರ್ಚ್ 27) : ಲೋಕಸಭಾ ಚುನಾವಣೆ 2024 ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿಸಿಕೊಂಡಿರುವ ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ ಅವರಿಗೆ ಕೊಕ್ ನೀಡಲಾಗಿತ್ತು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇದರೊಂದಿಎಗ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿ.
ಚಿತ್ರದುರ್ಗ ಹಾಲಿ ಬಿಜೆಪಿ ಸಂಸದ ನಾರಾಯಣಸ್ವಾಮಿ ಅವರು ಈ ಬಾರಿ ಮತ್ತೊಮ್ಮೆ ಸಿದ್ಧರಾಗಿದ್ದರು. ಇದರ ಜೊತೆಗೆ ಜನಾರ್ದನ ಸ್ವಾಮಿ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂಬ ಸುದ್ದಿ ಇತ್ತು. ಪ್ರಮುಖವಾಗಿ ಬಿಜೆಪಿಯಿಂದ ಮಾದಾರ ಚೆನ್ನಯ್ಯ ಸ್ವಾಮಿ ಅವರು ಈ ಬಾರಿ ಚಿತ್ರದುರ್ಗದಿಂದ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆಗಳು ನಡೆದವು.
ಇದೀಗ ಅಂತಿಮವಾಗಿ ಅಚ್ಚರಿ ಎಂಬಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತದಲ್ಲಿ ಗುರುತಿಸಿಕೊಂಡಿರುವ ಹಿರಿಯ ನಾಯಕ ಬಾಗಲಕೋಟೆ ಮೂಲದ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ನೀಡಿದ್ದಾರೆ. ಗೋವಿಂದ ಕಾರಜೋಳ ಅವರು ಬಾಗಲಕೋಟೆಯ ಮುಧೋಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕಾಂಗ್ರೆಸ್ನ ಆರ್ಬಿ ತಿಮ್ಮಾಪುರ ಅವರ ವಿರುದ್ಧ ಸೋಲುಕಂಡಿದ್ದರು.
ಹೀಗಾಗಿ ಅವರು ಈ ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಇಂಗಿತ ವ್ಯಕ್ತಪಡಿಸಿದ್ದರು. ಎಸ್ಸಿ ಮೀಸಲು ಕ್ಷೇತ್ರವಾಗಿರುವ ವಿಜಯಪುರದ ಟಕೆಟ್ ಈ ಬಾರಿ ಹಾಲಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಸಿಗುವುದು ಅನುಮಾನವಾಗಿತ್ತು. ಈ ಪೈಕಿ ಗೋವಿಂದ ಕಾರಜೋ ಅವರು ವಿಜಯಪುರ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದರು. ಆದರೆ, ಹೈಕಮಾಂಡ್ ಮತ್ತೊಮ್ಮೆ ವಿಜಯಪುರ ಟಿಕೆಟ್ ರಮೇಶ್ ಜಿಗಜಿಣಗೆ ಅವರಿಗೆ ನೀಡಿದ್ದು, ಇದೀಗ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಗೋವಿಂದ ಕಾರಜೋಳ ಅವರಿಗೆ ನೀಡಲಾಗಿದೆ.
ಇನ್ನು ಕಾಂಗ್ರೆಸ್ ನಿಂದ ಬಿಎನ್ ಚಂದ್ರಪ್ಪ ಕಣದಲ್ಲಿದ್ದಾರೆ. ಈ ಎಸ್ಸಿ ಮೀಸಲ ಕ್ಷೇತ್ರವಾಗಿ ಚಿತ್ರದುರ್ಗದಲ್ಲಿ ಈ ಬಾರಿ ಗೋವಿಂದ್ ಕಾರಜೋಳ ಮತ್ತು ಚಂದ್ರಪ್ಪ ನಡುವೆ ಪೈಪೋಟಿ ಆಯ್ಕೆ.