Breaking
Mon. Dec 23rd, 2024

ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್..!

ರಾಯಚೂರು :   ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ  ನಾಲ್ಕು ಘಟಕಗಳು ಸ್ಥಗಿತಗೊಂಡಿದ್ದು, ರಾಜ್ಯಕ್ಕೆ ವಿದ್ಯುತ್‌ ಕೊರತೆ ಎದುರಾಗಿದೆ. 

ಬರಗಾಲ ಹಿನ್ನೆಲೆ ಎಲ್ಲಿಯೂ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಎದುರಾಗಿದೆ. ರಾಜ್ಯಕ್ಕೆ ಶೇ.40ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕಗಳ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ. 

ಲಭ್ಯವಿರುವ ಟ್ಯೂಬ್ ಲೀಕೇಜ್ ಮತ್ತು ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ.

ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೇ ತಾಂತ್ರಿಕ ಸಮಸ್ಯೆಯ ಘಟಕಗಳು ಬಂದ್ ಆಗಿದ್ದು, ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ. 

Related Post

Leave a Reply

Your email address will not be published. Required fields are marked *