Breaking
Tue. Dec 24th, 2024

ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದಿದ್ದ ಇಬ್ಬರು ಯುವಕರ ಮೇಲೆ ಕೇಸ್ ದಾಖಲು

ಕಲಬುರಗಿ : ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುವ ಮೂಲಕ ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಠಿಸಿದ ಇಬ್ಬರ ಯುವಕರ ವಿರುದ್ಧ ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸಿದ್ದಾರೆ. ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದಿದ್ದ ಇಬ್ಬರು ಯುವಕರ ಮೇಲೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬುವ ಯುವಕರೇ ನಕಲಿ ಲೈಟರ್ ಮಾದರಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಟ್ಟ ಯುವಕ.

ಇದೇ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಯುವಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದು, ಅವರಿಂದ ನಕಲಿ ಲೈಟರ್ ಮಾದರಿ ಪಿಸ್ತೂಲ್ ಅನ್ನು ವಶಕ್ಕೆ ಪಡೆಯಲಾಗಿದೆ, ಮುಂದಿನ ದಿನಗಳಲ್ಲಿ ಈ ರೀತಿಯ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರಗಳನ್ನು ಹರಿಬಿಡುವ ಮೂಲಕ ಅಶಾಂತಿ ಸೃಷ್ಟಿಯಾಗದಂತೆ ಎಚ್ಚರಿಕೆ ನೀಡಲಾಗಿದೆ. ಬಿಸಿ ಮುಟ್ಟಿಸಿದ ನಂತರ ಯುವಕರು, ಈ ರೀತಿಯಲ್ಲಿ ನಕಲಿ ಪಿಸ್ತೂಲ್ ಮಾರಕಾಸ್ತ್ರಗಳನ್ನು ಹಿಡಿದಿರುವ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಇದೇ ತೆರನಾದ ಘಟನೆಗಳು ಮರುಕಳಿಸಿದರೆ ಅಂಥವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಎಚ್ಚರಿಕೆಯ ದಿನಾಚರಣೆಯನ್ನು ವರದಿ ಮಾಡಿದೆ.

Related Post

Leave a Reply

Your email address will not be published. Required fields are marked *