ಚಿತ್ರದುರ್ಗ, ಮಾರ್ಚ್. 29 : ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಕ್ಕೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್ ವಂಚಿತ ರಘು ಚಂದನ್ ಕಡೆಯವರು ಗೋ ಬ್ಯಾಕ್ ಗೋವಿಂದ ಕಾರಜೋಳ, ಗೋ ಬ್ಯಾಕ್ ಗೋವಿಂದ ಕಾರಜೋಳ ಎಂದು ಭಿತ್ತಿ ಚಿತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿ ಮುತ್ತಿಗೆ ಹಾಕಿದರು. ಜೊತೆಗೆ ಸಗಣಿ ಹಾಗೂ ಮೊಟ್ಟೆ ಎಸೆಯಲು ಸಿದ್ದತೆಯಲಿದ್ದ ವಿಷಯ ತಿಳಿದ ತಕ್ಷಣ ಪೊಲೀಸರು ವಶಕ್ಕೆ ಪಡೆದು ಅನಾಹುತ ತಪ್ಪಿಸಿದ್ದಾರೆ.
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರ ಪುತ್ರ ರಘು ಚಂದನ್ ಅವರು ಅಭ್ಯರ್ಥಿಯೆಂದು ಬಿಂಬಿಸಲಾಯಿತು. ಟಿಕೆಟ್ ಸಿಗುವ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇದರಿಂದ ರೊಚ್ಚಿಗೆದ್ದ ರಘು ಚಂದನ್ ಕಡೆಯವರು ಕಾರಜೋಳ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದರ ನಡುವೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಏಪ್ರಿಲ್ 3 ರಂದು ಸ್ವಾಭಿಮಾನ ಸಭೆ ನಡೆಸುತ್ತಿರುವ ರಘು ಚಂದನ್ ಅವರು ಹೊಳಲ್ಕೆ ಶಾಸಕ ಎಂ ಚಂದ್ರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಹಿರಿಯೂರಿನಲ್ಲಿ ಮಾತನಾಡಿದ ಗೋವಿಂದ ಕಾರಜೋಳ ಅವರು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಕೂಟಕ್ಕೆ ಗೆಲುವು ಸಿಗಲಿದೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.