ಬೆಳಗಾವಿ : ಗೋಕಾಕ : ನಗರದ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿದರು.
ತಮ್ಮ ಮಗ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಗೋಕಾಕ ಹಾಗೂ ಅರಭಾವಿ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿಯಾಗಿ ಪ್ರಸ್ತುತ ರಾಜಕೀಯ ಕುರಿತು ಸಮಾಲೋಚನೆ ನಡೆಸಿದರು.