ಚಿತ್ರದುರ್ಗ ನಗರ ಪೊಲೀಸ್ ಸಿಬ್ಬಂದಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ತಾಯಿ ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ.
ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ ತಾಯಿ ಸಂತೃಪ್ರಿಯಿಂದ ಶರಣಾದ ಭಕ್ತ ಜನರನ್ನು ಹರಸುತ್ತಾ ತಾನು ಸಹ ಸಂತಸ ಸಂಭ್ರಮದಿಂದ ಕಂಗೊಳಿಸುತ್ತಿದ್ದಾಳೆ ಮಹಾತಾಯಿ. ಈ ಕಣಿವೆ ಮಾರಮ್ಮ ತಾಯಿ ಕುಂಚಿಗನಾಳು ಕಣಿವೆ ಬೆಟ್ಟ ಬಿಟ್ಟು ಇಳಿದು ಬಂದ ಕಥೆ ರೋಚಕವಾಗಿದೆ.
ಹಿಂದೆ ಚಿತ್ರದುರ್ಗದಿಂದ ಹಿರಿಯ-ಸಿರಾ-ತುಮಕೂರು ಬೆಂಗಳೂರಿಗೆ ಹೋಗುವ ಮಾರ್ಗ ಈ ಕುಂಚಿಗನಾಳು ಕಣಿವೆ ಮೇಲಿಂದ ಸಾಗಿಹೋಗುತ್ತಿತ್ತು. ಗುಡ್ಡ ಹತ್ತಿ-ಅತ್ತ ಇಳಿದು ಮುಂದೆ ಸಾಗಬೇಕಾದಾಗ ಬಹುಪ್ರಯಾಸದ ಹಾದಿ. ಎತ್ತಿನ ಬಂಡಿಗಳು, ಬೆಟ್ಟ ಹತ್ತುವುದು ಬಹು ಶ್ರಮದ ಹಾದಿ ಬೆಟ್ಟ ಹತ್ತಿ ಸ್ವಲ್ಪ ಸಮತಟ್ಟಾದ ಜಾಗ, ಅಲ್ಲಿ ನಿಂತು ಸುಧಾರಿಸಿಕೊಂಡು ಮತ್ತೆ ಪ್ರಯಾಣ ಆರಂಭಿಸಲು.
ಸ್ಥಳದಲ್ಲಿ ಆ ಜಾಗದಲ್ಲಿದ್ದ ಒಂದು ಕೋಡುಗಲ್ಲನ್ನು ಮಾರಮ್ಮ ದೇವಿ ಎಂದು ಪೂಜಿಸುತ್ತಿದ್ದರು. ನಂತರದಲ್ಲಿ ಚಿತ್ರದುರ್ಗ ಪಾಳೆಯಗಾರರು ಪೂರ್ವ ದಿಕ್ಕಿನ ರಕ್ಷಣೆಯನ್ನು ಈ ಮಹಾತಾಯಿಗೆ ವಹಿಸಿ ಒಂದು ದೇವಾಲಯ ನಿರ್ಮಿಸಿ ದೇವಿಯ ವಿಗ್ರಹ ಪ್ರತಿಷ್ಠಾಪಿಸಿ, ಕುಂಚಿಗನಾಳು ಗ್ರಾಮದ ಒಂದು ಕುಟುಂಬವನ್ನು ಪೂಜೆಗಾಗಿ ನೇಮಿಸಿದರು. ವರ್ಷಕ್ಕೊಮ್ಮೆ ದೇವಿಯ ಜಾತ್ರೆ ಆರಂಭವಾಯಿತು. ಸುತ್ತಲ ಗ್ರಾಮಸ್ಥರು, ದುರ್ಗದ ಭಕ್ತರು ಸೇರಿ ಪೂಜೆ-ಜಾತ್ರೆ ವೈಭವ ಕಳೆಗಟ್ಟಿತು. ಒಂದು ಕುಟುಂಬ “ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು” ಎಂಬ ಗಾದೆ ಮಾತಿನಂತೆ ಪೂಜಾರರ ಕುಟುಂಬ ಬೆಳೆದು ದಾಯಾದಿಗಳಾಗಿ ಪೂಜಾರಿಕೆಗೆ ಇಂತಿಷ್ಟು ತಿಂಗಳು ಸಮಯಾವಕಾಶ ಸಿಗುತ್ತದೆ.
ಹಿಂದೆ ಚಾರ್ಕೋಲ್ ಇಂಜಿನ್‌ಗಳು, ಗುಡ್ಡಹತ್ತಿ ಹೋಗುವಾಗ ಕನಿಷ್ಠ ಮೂರು ಬಾರಿ ನಿಂತು ಕಂಡಕ್ಟರ್, ಇದ್ದಲಿನ ಬೆಂಕಿಗೆ ಗಾಳಿ ಹೊಡೆದು ಬಸ್ಸು ಗುಡ್ಡ ಹತ್ತಿ ಹೋಗುತ್ತಿತ್ತು. ಬಸ್ಸಿನ ಚಾಲಕರು, ಕಂಡಕ್ಟರ್ ಕಣಿವೆ ಮಾರಮ್ಮನವರಿಗೆ ಪೂಜೆ ಸಲ್ಲಿಸಿ ಮುಂದೆ ಸಾಗುವ ಸಂಪ್ರದಾಯ ಶುರುವಾಗಿ ಬಸ್ಸಿನಲ್ಲಿ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಕುರುಡು ಕಾಂಚಾಣ ಹೆಚ್ಚಾದಂತೆ ಅರ್ಚಕರಲ್ಲಿ ನಾನು- ನೀನು ಎಂಬ ಪೈಪೋಟಿ ಆರಂಭ, ಹೊಟ್ಟೆ ಕಿಚ್ಚು, ರೋಷ ದ್ವೇಷಕ್ಕೆ ಕಾರಣವಾಗಲಿಲ್ಲ. ನೋಡವಳಂದಾವ, ಮೊಗ್ಗಿನ ಮಾಲೆ ಚಂದವಾ, ಬೆಟ್ಟಿ ಬಿಟ್ಟಿಳಿಯೇ ಸಡಗಾರ” ಎಂಬ ಒಂದು ಜಾನಪದ ಹಾಡು ಇದೆ. ಆದರೆ ಇಲ್ಲಿ ಕಣಿ ಮಾರಮ್ಮ ಕುಂಚಿಗನಾಳು ಕಣಿವೆ ಬೆಟ್ಟದಿಂದ ಸಡಗರದಿಂದ ಇಳಿದು ಬರಲಿಲ್ಲ, ಕೋಪ-ತಾಪ, ಚಿತ್ರದುರ್ಗ ಗ್ರಾಮಾಂತರ ಪೊಲೀಸರ ಕಾವಲಿನಲ್ಲಿ ಕುಂಚಿಗಳು ಕಣಿವೆ ಇಳಿದು ನಗರಠಾಣೆ ಪಕ್ಕದಲ್ಲೇ ಚಿಕ್ಕ ಕಟ್ಟಡದ ಕಟ್ಟಡದ ಮುಂದೆ ಬಯಲಿನಲ್ಲಿ ನ್ಯಾಯಾಲಯದ ಸಾಕ್ಷಿಯಾಗಿ ಬಂದು ಇದ್ದ ಬಹುದಿಂದ ಕುಳಿತಳು.
ಇದಕ್ಕೆ ಕಾರಣ ಪೂಜಾರಿಕೆಯ ಜಗಳ, ಆದಾಯದ ಹಣದ ಮೇಲಿನ ಆಸೆ, ಪೂಜಾರಿಕೆ ಜಗಳ ಆರಂಭವಾಗಿ ನಾನು-ನೀನು ಎಂದು ಕಿತ್ತಾಡಿದ ಅರ್ಚಕರಲ್ಲಿ ಒಬ್ಬ ಮೂರೂ ಬಿಟ್ಟವನು ಭಯಭಕ್ತಿ ಇಲ್ಲದವನೂ, ಹಣದ ಆಸೆಗೆ ಬಲಿಯಾದವನು, ದೇವಿವಿಗ್ರಹವನ್ನು ಸುತ್ತಿಗೆಯಿಂದ ಬಡಿದು ಭಿನ್ನಗೊಳಿಸಿ “ ಅದು ಹೇಗೆ ಪೂಜೆ ಮಾಡುತ್ತೀಯಾ?” ಎಂದು ಸವಾಲು ಹಾಕಿ ಪೂಜಾರಿಗಳ ಜಗಳ ದೇವಿ ವಿಗ್ರಹ ಭಿನ್ನವಾಗುವವರೆಗೂ ನಡೆದುಕೊಂಡು ಗ್ರಾಮಾಂತರ ಪೊಲೀಸ್ ಠಾಣೆ ಮಟ್ಟಿಲೇರಿ, ಕಣಿವೆ ಮಾರಮ್ಮ ತನಗೆ ನ್ಯಾಯಪೀಠ ಪವೇಶಿಸಲಾಯಿತು.
ಚಿತ್ರದುರ್ಗ ಗ್ರಾಮಾಂತರ ವ್ಯತ್ಯಾಸವಾಯಿತು ಕಣಿವೆ ಮಾರಮ್ಮ ದೇವಿ ವಿಗ್ರಹ ತಂದು, ಈಗ ಇರುವ ಜಾಗದಲ್ಲಿ ಠಾಣೆ ಬಾಗಿಲ ಬಲಭಾಗದಲ್ಲಿಟ್ಟರು. ಅಲ್ಲಿಂದ ಶುರುವಾಯಿತು, ಠಾಣೆಗೆ ಬರುವ ಜನ ಭಿನ್ನವಾದ ದೇವಿಗೆ ಅಡ್ಡ ಬಿದ್ದು, ತಮ್ಮ ಕಷ್ಟ ಹೇಳಿಕೊಂಡು ಬೇಡಿಕೆ ಸಲ್ಲಿಸಿದರು. ಯಾರೋ ಅರಿಸಿನ ಕುಂಕುಮ ಹಚ್ಚಿದರು, ಯಾರೋ ಹೂವು ಹಣ್ಣು ತಂದಿಟ್ಟರು. ವಿಗ್ರಹ ಭಿನ್ನವಾಗಿದ್ದು ಇಲ್ಲಿ ಗೌಣವಾಗಿ ಹೋಯಿತು. “ಕಣಿವೆ ಮಾರಮ್ಮ ತಾಯಿ ತಮಗಾಗಿ ಬಂದು ಇಲ್ಲಿ ಕುಳಿತಿದ್ದಾಳೆ” ಎಂಬ ಭಾವನೆ ಭಕ್ತರಲ್ಲಿ ಶುರುವಾಗಿಬಿಟ್ಟಿತು. ಭಕ್ತಿ ಭಾವದಿಂದ ಜನ ಪೂಜೆ ಮಾಡುವುದನ್ನು ಕಂಡ ಪೊಲೀಸರು ದೇವಿ ವಿಗ್ರಹಕ್ಕೆ ಒಂದು ಚಿಕ್ಕ ನೆರಳು ಕಟ್ಟಿ ತಾವೂ ಪೂಜೆ ಆರಂಭಿಸಿದರು.
ಹೀಗೆ ಶುರುವಾಯಿತು ಚಿತ್ರದುರ್ಗ ನಗರಠಾಣೆ ಬಳಿ ರಾರಾಜಿಸುತ್ತಿರುವ ಕಣಿವೆ ಮಾರಮ್ಮ ದೇವಿ ದರ್ಬಾರ್. ಭಕ್ತ ಜನ ವಿಧ-ವಿಧ ಪೂಜಾ ವಿಶೇಷಗಳು ಆರಂಭವಾಗಿ ಬಿಟ್ಟವು. ಚಿಕ್ಕ ನೆರಳು ಹೋಗಿ ಅಮ್ಮನವರಿಗೆ ಒಂದು ಪಟ್ಟು ಗುಡಿಯಾಯಿತು. ಅಲ್ಲಿಗೆ ಒಬ್ಬ ಜೋಗತಿ ಬಂದು ಪೂಜೆ ಮಾಡತೊಡಗಿದಳು. ಭಿನ್ನವಾದ ವಿಗ್ರಹದ ಬದಲಿಗೆ ಬೇರೆ ಸುಂದರ ವಿಗ್ರಹ ಮಾಡಿದರು. ಸೀರೆ-ಕಾಣಿಕೆ ಚಿಕ್ಕ-ಚಿಕ್ಕ ವಡವೆ ಭಕ್ತರಿಂದ ಬರಲು ಆರಂಭವಾಗಿ ಪೂಜೆ ಮಾಡುತ್ತಿದ್ದ ಜೋಗಿತಿ ದನಿ ಜೋರಾಯಿತು. ಈ ಪೂಜೆಗಿಷ್ಟು, ಆ ಪೂಜೆಗಿಷ್ಟು, ಎಡೆ ಮಾಡಿಸಲು ಇಷ್ಟು ಹಣ ನಿಗಧಿ ಮಾಡಿದ ಜೋಗಿತಿ ತಾನೇ ಬಲಿತು ಹಣವಂತಳಾಗಿಬಿಟ್ಟಳು.
ಇದನ್ನೆಲ್ಲಾ ಕಂಡ ಜೋಗಿತಿಯನ್ನು ದೂರಸರಿಸಿ ಅರ್ಚಕರನ್ನು ನೇಮಿಸಿದರು. ಆ ವೇಳೆಗೆ ಗ್ರಾಮಾಂತರ ಠಾಣೆಯಿಂದ ಹೊರವಲಯಕ್ಕೆ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಿ ಸ್ಥಗಿತಗೊಂಡಿದೆ. ದೇವಿ ಉಸ್ತುವಾರಿ ನಗರಠಾಣೆ ಹೊಣೆಯಾಯಿತು. ಶಿಥಿಲವಾಗಿದ್ದ ನಗರಾಣೆ ಕಟ್ಟಡ ಬದಲಿ ಹೊಸ ಕಟ್ಟಡ ನಿರ್ಮಾಣ ಪ್ರಾರಂಭವಾಯಿತು, ಭಕ್ತರು, ಪೊಲೀಸರ ಮುಂದಾಳತ್ವದ ಚಿತ್ರದುರ್ಗ ನಗರದ ಮಧ್ಯಭಾಗದಲ್ಲಿ ನಗರ ಪೊಲೀಸ್ ಠಾಣೆ ಪಕ್ಕ ಶ್ರೀ ಕಣಿವೆ ಮಾರಮ್ಮನ ನೂತನ ದೇವಾಲಯ ನಿರ್ಮಾಣಗೊಂಡು ಈಗ ಸಕಲ ವೈಭೋಗದಿಂದ ದೇವಿರಾರಾಜಿಸುತ್ತಿದ್ದಾಳೆ.
ಪ್ರತಿದಿನ ಪೂಜೆ- ಮಂಗಳವಾರ, ಶುಕ್ರವಾರ ವಿಶೇಷ ಪೂಜೆಗಳು ವರ್ಷಕ್ಕೊಮ್ಮೆ ಜಿಲ್ಲಾ ಕಛೇರಿ ದಾರಿ ಬಂಧ ಮಾಡಿ ಭಕ್ತರಿಗೆ ಭಾರಿ ಅನ್ನಸಂತರ್ಪಣೆ, ಹೀಗೆ ಕುಂಚಿಗನಾಳು ಕಣಿವೆ ಮಾರಮ್ಮ ದೇವಿ ಬೆಟ್ಟ ಬಿಟ್ಟು ಇಳಿದು ಬರುವಾಗ, ಕೋಪ, ದ್ವೇಷ-ರೋಷದಿಂದ ನಗರಕ್ಕೆ ಆಗಮಿಸಿದ ದೇವಿ ಈಗ ಬಹು ವೈಭವ, ಸಂತಸ, ಸಡಗರ ನೆಲೆಸಿ ಬಂದ ಭಕ್ತರು ಅನುಗ್ರಹಿಸುತ್ತಿದ್ದಾಳೆ ಎನ್ನುವಲ್ಲಿಗೆ ದೇವಿ ಬೆಟ್ಟ ಬಿಟ್ಟಿಳಿದ ಕಥೆ ಮುಗಿಯಿತು, ಎಲ್ಲರಿಗೂ ಮಂಗಳವಾಗಲಿ.
ಕೃಪೆ : ಸುದ್ದಿ ಗಿಡುಗ, ಕನ್ನಡ ದಿನಪತ್ರಿಕೆ, ಚಿತ್ರದುರ್ಗ (ಸಂಗ್ರಹ ಲೇಖನ) ಲೇಖಕರು : ದಿ. ಡಾ. ಎಚ್.ಎನ್.ತಿಪ್ಪೇರುದ್ರಸ್ವಾಮಿ ಮಾಧ್ಯಮ ಅಕಾಡೆಮಿ ಪುರಸ್ಕøತರು, ಚಿತ್ರದುರ್ಗ