ನಗರದ ತೇರುಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ದರ್ಶನ ಪಡೆದ ಅವರು ಸುದ್ಧಿಗಾರರ ಜೊತೆಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಇಬ್ಬರು ಜಂಟಿಯಾಗಿ ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರಲಿದೆ.
ಹೊರಗಿನವರಿಗೆ ಟಿಕೆಟ್ ನೀಡುವುದರಿಂದ ಅವರ ವಿರುದ್ಧ ಜಿಲ್ಲೆಯಲ್ಲಿ ಬಂಡಾಯ ಎದ್ದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ವರಿಷ್ಠರು ನನಗೆ ಟಿಕೆಟ್ ನೀಡಿದ್ದು ಎಲ್ಲರಿಗೂ ಸರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ. ಎರಡೂ ಪಕ್ಷಗಳ ನಾಯಕರು, ಕಾರ್ಯಕರ್ತರು ಒಗ್ಗಟ್ಟಾಗಿ ಸೇರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ್, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡ ಎನ್.ಆರ್.ಲಕ್ಷ್ಮಿಕಾಂತ್ ಸೇರಿದಂತೆ ಎರಡೂ ಪಕ್ಷದ ಸಂಘಟನೆಯ ಕಾರ್ಯಕ್ರಮ ನಡೆಯಿತು.