ಉಡುಪಿ : ಉಡುಪಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಕೋಟೆ ಮೂಲದ ಜ್ಯೋತಿ ಮೃತ ದುರ್ದೈವಿ.
ಕಾಪು ಪೊಲೀಸ್ ಠಾಣೆಯಲ್ಲಿ ಜ್ಯೋತಿ ಕರ್ತವ್ಯ ನಿರ್ವಹಿಸುತಿದ್ದರು. ಕೆಲಸ ಮುಗಿಸಿ ಪೊಲೀಸ್ ಕ್ವಾಟ್ರಸ್‌ಗೆ ತೆರಳಿದ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂದು ತಿಳಿದು ಬಂದಿಲ್ಲ. ಆದರೆ ಕೌಟುಂಬಿಕ ಸಮಸ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಹಿನ್ನೆಲೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್‌ಪಿ ಡಾ.ಅರುಣ್ ಅವರು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.