Breaking
Mon. Dec 23rd, 2024

ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಭಾರತ ಪ್ರದಾನ..!

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಭಾರತ ಪ್ರದಾನ ಮಾಡಿದರು. 

ಈ ವೇಳೆ ಪ್ರಧಾನಿ ನರೇಂದ್ರ ಮೋದಿ , ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ.

ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್‌, ಪಿ.ವಿ. ನರಸಿಂಹ ರಾವ್, ಕೃಷಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ.

Related Post

Leave a Reply

Your email address will not be published. Required fields are marked *