ಚಿತ್ರದುರ್ಗ, ಏಪ್ರಿಲ್. 01 : ಇದೆ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಎಸ್ಸಿ. ಮೀಸಲು ಕ್ಷೇತ್ರದಿಂದ ಬಿಜೆಪಿ. ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಶಾಸಕ ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಸಿದ್ದಾಪುರ ಸುರೇಶ್, ಜಿಲ್ಲಾ ಜೆಡಿಎಸ್. ಅಧ್ಯಕ್ಷ ಜಯಣ್ಣ, ಮಾಜಿ ಅಧ್ಯಕ್ಷ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.