Breaking
Mon. Dec 23rd, 2024

ಶ್ರೀ ಶಿವಕುಮಾರ ಸ್ವಾಮೀಜಿ  ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ  ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ

The Prime Minister, Shri Narendra Modi meeting Sri Shivakumar Swamy ji, during his visit at the Siddaganga Mutt, at Tumkur, in Maharashtra on September 24, 2014.

ಬೆಂಗಳೂರು, ಏಪ್ರಿಲ್ 1: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ  ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ  ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ  ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ. 

ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ’ ಎಂದು ಎಕ್ಸ್ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಶ್ರೀಗಳ 117 ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಸೋಮವಾರ ಬೆಳಗ್ಗೆ ನೆರವೇರಿತು. ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾದರು.

11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ.

Related Post

Leave a Reply

Your email address will not be published. Required fields are marked *