Breaking
Mon. Dec 23rd, 2024

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿ ಆಸ್ಪತ್ರೆಯಿಂದ ಹೊರಟ ಸ್ನೇಹಿತ ಚಿ. ಗುರುದತ್

ಸೋಮವಾರ ಸಂಜೆ ಶಿವರಾಜ್ ಕುಮಾರ್ ಅವರು ಆಸ್ಪತ್ರೆಯಿಂದ ಮನೆಗೆ ಮರಳುತ್ತಾರೆ ಎಂದು ಹೇಳಿದರು. ಸದ್ಯದ ಮಾಹಿತಿ ಪ್ರಕಾರ, ಮಂಗಳವಾರ (ಏ.2) ಬೆಳಗ್ಗೆ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಇಂದು ಅವರ ಆಪ್ತರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜ್ ಕುಮಾರ್ ಅವರ ಸ್ನೇಹಿತ ಚಿ. ಗುರುದತ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು.

ಅನಾರೋಗ್ಯದ ಕಾರಣದಿಂದ ನಟ ಶಿವರಾಜ್‌ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ.

ಜನರಲ್ ಚೆಕ್ ನಿಮಿತ್ತ ಶಿವಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಇಂದು (ಏಪ್ರಿಲ್ 1) ಸಂಜೆ ಮನೆಗೆ ಮರಳಿದ್ದಾರೆ. ಆದರೆ ಸದ್ಯದ ಮಾಹಿತಿ ಪ್ರಕಾರ ಮಂಗಳವಾರ (ಏಪ್ರಿಲ್ 2) ಬೆಳಗ್ಗೆ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರು ಆಪ್ತರು ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜ್ಕುಮಾರ್ ಅವರ ಸ್ನೇಹಿತ ಚಿ. ಗುರುದತ್ ಅವರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿ ತೆರಳಿದ್ದಾರೆ. ಅದಕ್ಕೂ ಮುನ್ನ ಮಧು ಬಂಗಾರಪ್ಪ ಕೂಡ ಆಸ್ಪತ್ರೆಗೆ ಬಂದಿದ್ದರು.

ಕಳೆದ ಒಂದಷ್ಟು ದಿನಗಳಿಂದ ಗೀತಾ ಶಿವರಾಜ್ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದರು. ಬಿಡುವಿಲ್ಲದೇ ಪ್ರಚಾರ ಮಾಡಿದರು ಅವರು ಸ್ವಲ್ಪ ದಣಿದಿರಬಹುದು. ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. 

Related Post

Leave a Reply

Your email address will not be published. Required fields are marked *