ಬೆಂಗಳೂರು, ಏಪ್ರಿಲ್.01 : ತನ್ನ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪನವರಿಗೆ ನಿರಾಸೆಯಾಗಿತ್ತು. ಪುತ್ರ ರಘು ಚಂದನ್ ಅವರಿಗೆ ಬಿಟ್ಟು ಟಿಕೆಟ್ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ನೀಡಲಾಯಿತು. ಇದರಿಂದ ಬೇಸರಗೊಂಡಿದ್ದ ಚಂದ್ರಪ್ಪ ಬಂಡಾಯವೆದ್ದಿದ್ದರು. ಕಳೆದ ಕೆಲ ದಿನಗಳಿಂದಾನೂ ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕರ ಬಂಡಾಯದ ಬೆಂಕಿ ಹೊಗೆಯಾಡುತ್ತಿತ್ತು. ಇದೀಗ ಬಂಡಾಯದ ಬಿಸಿಯನ್ನು ಆರಿಸುವಲ್ಲಿ ಮಾಜಿ ಯಡಿಯೂರಪ್ಪ ಅವರು ಸಫಲರಾಗಿದ್ದಾರೆ ಸಿಎಂ.
ಪ್ರತ್ಯೇಕ ಸ್ಪರ್ಧೆಯ ನಿರ್ಧಾರಕ್ಕೆ ಬಂದಿದ್ದ ಎಂ ಚಂದ್ರಪ್ಪ ಅವರಿಗೆ ತಮ್ಮ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕರೆಸಿದ್ದರು ಬಿ ಎಸ್ ಯಡಿಯೂರಪ್ಪ. ಬಳಿಕ ಚಂದ್ರಪ್ಪ ಅವರ ಬಳಿ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸಿದರು. ಅವರ ಸಂಧಾನ ಸಭೆ ಯಶಸ್ವಿಯಾಗಿದ್ದು, ತಂದೆ-ಮಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರವಾಗಿ ಕೆಲಸ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಎಂ. ಚಂದ್ರಪ್ಪ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ನನ್ನ ಮಗ ಪಕ್ಷೇತರವಾಗಿ ಹರಿಯುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ನಮಗೆ ಯಾವತ್ತೂ ಅನ್ಯಾಯ ಮಾಡಿದವರಲ್ಲ. ಅವರು ನನ್ನೊಂದಿಗೆ ಮತ್ತು ಬೆಂಬಲಿಗರ ಜೊತೆ ಮಾತಾಡಿದ್ದಾರೆ. ಅವರ ಮಾತಿಗೆ ಗೌರವ ಕೊಟ್ಟು ನನ್ನ ಮಗ ಪಕ್ಷೇತರನಾಗಿ ಸ್ಪರ್ಧೆ. ನಾವು ಬಿಜೆಪಿ ಪರ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಇರುತ್ತೇವೆ. ಪುತ್ರ ರಘುಚಂದನಗೆ ಮುಂದೆ ಉತ್ತಮ ಅವಕಾಶ ನೀಡುವ ವಿಶ್ವಾಸವಿದೆ ಎಂದರು.
ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಚಂದ್ರನ್ ಮಾತನಾಡಿ, ಬಿಜೆಪಿ ಅಭ್ಯರ್ಥಿಗೆ ನಾವು ಬೆಂಬಲ ಕೊಡುವ ತೀರ್ಮಾನ ಮಾಡಿದ್ದೇವೆ. ನರೇಂದ್ರ ಮೋದಿ ಕೈಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಯಡಿಯೂರಪ್ಪ ನಮಗೆ ಗಾಡ್ ಫಾದರ್. ಯಡಿಯೂರಪ್ಪ ನೆರಳಲ್ಲೇ ರಾಜಕೀಯಕ್ಕೆ ಬಂದವರಾಗಿದ್ದೇವೆ. ಯಡಿಯೂರಪ್ಪ ಸಾಹೇಬರನ್ನು ನಂಬಿ ನಾವು ಬಿಜೆಪಿಗೆ ಬಂದಿದ್ದೇವೆ. ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ, ಮತ್ತೆ ಬಿಜೆಪಿಗೆ ಬಂದಾಗ ಅಚಲವಾಗಿ ನಿಂತಿದ್ದೆವು. ಯಡಿಯೂರಪ್ಪ ಅವರು ತಂದೆ ಸ್ಥಾನದಲ್ಲಿದ್ದಾರೆ, ಅವರ ಮಾತನ್ನು ಕೇಳುತ್ತೇವೆ ಎಂದರು.