Breaking
Tue. Dec 24th, 2024

ಶಾಮನೂರು ಶಿವಶಂಕರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ..!

ಶಾಮನೂರು ಶಿವಶಂಕರಪ್ಪ ಅವರು ನೀಡಿದ್ದ ಒದೊಂದು ಹೇಳಿಕೆ ರಾಷ್ಟ್ರಮಟ್ಟದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ಅವರ ಆ ಹೇಳಿಕೆಗೆ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಸೇರಿದಂತೆ ಸಾಕಷ್ಟು ಮಹಿಳಾಮಣಿಗಳು ಆಕ್ರೋಶ ಹೊರಹಾಕಿದ್ದರು. ಇದೀಗ ಖುದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಬರೆದ ಪತ್ರದಲ್ಲಿ ಏನಿದೆ?ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬಗ್ಗೆ ನನಗೆ ಆಗದವರು ದ್ವೇಷದಿಂದ ಈ ರೀತಿ ಹೇಳಿಕೆ ಕೊಟ್ಟಿದ್ದೇನೆ ಎಂದು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೇ ಆಧಾರವಾಗಿ ಇಟ್ಟುಕೊಂಡು ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ತಮ್ಮ ಟ್ವೀಟ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಅಂತಹ ಹೇಳಿಕೆ ನೀಡಿಲ್ಲ. 

ನಾನು ಹೇಳಿದ ಹೇಳಿಕೆ ಈ ರೀತಿ ಇದೆ. ‘ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತರಲ್ಲ ಎಂಬುದನ್ನು ನಮ್ಮ ಪಕ್ಷದ ದಿವಂಗತ ಇಂದಿರಾಗಾಂಧಿಯವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲೂ ಮಹಿಳೆಯರೇ ಸ್ಪರ್ಧಿಸಿದ್ದು, ನಿಮ್ಮ ಮತವನ್ನು ನಿಮ್ಮ ಸಮಸ್ಯೆಯನ್ನು ದೆಹಲಿಯವರೆಗೆ ತಲುಪಿಸುವವರಿಗೆ ಮತ ನೀಡಿ’ ಎಂದು ಹೇಳಿದ್ದೇನೆ ಎಂದಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ಶಾಮನೂರ, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ತಮ್ಮ ‘ಎಕ್ಸ್‌’ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಸಹಾಯಕ ಚುನಾವಣಾಧಿಕಾರಿಗೆ ಲಿಖಿತವಾಗಿ ಸಮುಜಾಯಿಷಿ ನೀಡುವಂತೆ ಕೋರಿದ್ದಾರೆ.

ತಿರುಗೇಟು ನೀಡಿದ್ದ ಗಾಯತ್ರಿ ಸಿದ್ದೇಶ್ವರ್‌ : –ಇನ್ನು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಈ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುತ್ತಿದ್ದಾರೆ. ಆಗಸದಲ್ಲಿ ಹಾರುವ ಹಂತವನ್ನು ತಲುಪಿದ್ದಾರೆ. ಎಲ್ಲ ಕ್ಷೇತ್ರದಲ್ಲಿ ಅವರ ಕೊಡುಗೆ ಇದೆ. ಈ ವಿಚಾರ ಅಜ್ಜನಿಗೆ ಗೊತ್ತಿಲ್ಲವೆಂದು ಅನ್ನಿಸುತ್ತದೆ ಎಂದು ತಿರುಗೇಟು ನೀಡಿದ್ದರು.

 

Related Post

Leave a Reply

Your email address will not be published. Required fields are marked *