Breaking
Tue. Dec 24th, 2024

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ನಾಮಪತ್ರ ಸಲ್ಲಿಕೆ : ಸಿಎಂ, ಡಿಸಿಎಂ ಸಾಥ್ ನೀಡಲಿದ್ದಾರೆ.

ಚಿತ್ರದುರ್ಗ, ಏಪ್ರಿಲ್. 03 : ಲೋಕಸಭಾ ಚುನಾವಣೆ ರಾಜ್ಯದಲ್ಲಿ ಎರಡು ನಂತರ. ಏಪ್ರಿಲ್ 4 ನಾಳೆ ಅಂದರೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಹೆಚ್ಚಿನ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ. 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಏಪ್ರಿಲ್ 4, ಗುರುವಾರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ನೀಲಕಂಠೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಲಕ್ಷಾಂತರ ಬೆಂಬಲಿಗರೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದ ನಂತರ ಜಿಲ್ಲಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತಿ ಇದೆ ನನಗೆ ಆನೆ ಬಲ ತಂದುಕೊಡಲಿದೆ ಎಂಬುದು ನನ್ನ ಅಚಲ ನಂಬಿಕೆಯಾಗಿದೆ. ಆದ್ದರಿಂದ ತಾವುಗಳು ತಮ್ಮ ಸ್ನೇಹಿತರ ಜೊತೆ ನಾಮಪತ್ರ ಸಲ್ಲಿಕೆ ಸಂದರ್ಭ ನನ್ನೊಂದಿಗೆ ಇರಬೇಕೆಂಬುದು ನನ್ನ ಮಹದಾಸೆ ಎಂದು ಬಿ.ಎನ್. ಚಂದ್ರಪ್ಪ ಅವರು ಮನವಿ ಮಾಡಿದ್ದಾರೆ.

ದೇಶದಲ್ಲಿಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಾದರಿ ಆಗಿವೆ. ಟೀಕೆ ಮಾಡಿದವರೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಉತ್ಸಾಹ ತೋರುತ್ತಿದ್ದಾರೆ.

ಅಷ್ಟರಮಟ್ಟಿಗೆ ಬಡವರ ಪರ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಯೋಜನೆಗಳು ದೇಶದ ಜನರ ಮೆಚ್ಚುಗೆ ಗಳಿಸಿವೆ. ಪ್ರತಿಪಕ್ಷಗಳ ನಿದ್ದೆಗೆಡಿಸಿವೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಸ್ತ್ರೀಶಕ್ತಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳ ಜೊತೆಗೆ ಹಸಿದವರು, ಶ್ರಮಿಕ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಹೀಗೆ ಅನೇಕ ಕಾರ್ಯಕ್ರಮಗಳು ಜನರ ಮನಗೆದ್ದಿವೆ . 

ನಾಮಪತ್ರ ಸಲ್ಲಿಕೆ ವೇಳೆ ಸಿಎಂ, ಡಿಸಿಎಂ ಭಾಗಿ : ಬಿಎನ್ ಚಂದ್ರಪ್ಪ ಅವರು ನಾಮಪತ್ರ ಸಲ್ಲಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ಸಚಿವ ಕೆ.ಹೆಚ್. ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್, ಶಾಸಕರಾದ ಟಿ ರಘುಮೂರ್ತಿ, ಬಿಜಿ ಗೋವಿಂದಪ್ಪ, ಎನ್ ವೈ ಗೋಪಾಲಕೃಷ್ಣ, ಮಾಜಿ ಸಚಿವ ಎಚ್. ಆಂಜನೇಯ ಮಾಜಿ ಶಾಸಕರು, ಹಿರಿಯ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. 

Related Post

Leave a Reply

Your email address will not be published. Required fields are marked *