Breaking
Tue. Dec 24th, 2024

ಅಕ್ರಮವಾಗಿ ಹಣ, ಮದ್ಯ ಅಥವಾ ಇತರೆ ವಸ್ತುಗಳ ಸಾಗಾಣಿಕೆ ಕಂಡುಬಂದಲ್ಲಿ ಕೂಡಲೇ ವಶಪಡಿಸಿ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ..!

ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಅಕ್ರಮವಾಗಿ ಹಣ, ಮದ್ಯ ಅಥವಾ ಇತರೆ ವಸ್ತುಗಳ ಸಾಗಾಣಿಕೆ ಕಂಡುಬಂದಲ್ಲಿ ಕೂಡಲೇ ವಶಪಡಿಸಿಕೊಂಡು ನಿಯಮಾನುಸಾರ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ (ಏ.02) ನಡೆದ ಲೋಕಸಭಾ ಚುನಾವಣೆಯ ಕರ್ತವ್ಯ ನಿಯೋಜಿತ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ವಾಹನಗಳಲ್ಲಿ ಸರಕು ಸಾಗಣೆಕೆಯ ಸೂಕ್ತ ದಾಖಲೆಗಳನ್ನು ಹೊಂದಿರುವ ಕುರಿತು ಮತ್ತು ಹಣಕಾಸಿನ ವಹಿವಾಟಿನ ವಿವರಗಳನ್ನು ಪ್ರಮಾಣೀಕರಿಸುವ ಇತರ ದಾಖಲೆಗಳನ್ನು ಹೊಂದಿರುವ ಅಗತ್ಯ ದಾಖಲೆಗಳನ್ನು ಪರಿಶೀಲಿಸಬೇಕು.

ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.

ವಾಹನಗಳ ತಪಾಸಣೆ ಸಮಯದಲ್ಲಿ ನಿಯೋಜಿತ ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚಿಸಿದರು.

ಚೆಕ್ ಪೋಸ್ಟ್ ಗಳಲ್ಲಿ ಅನಧಿಕೃತ ನಗದು ಅಥವಾ ಮದ್ಯಗಳನ್ನು ವಶಪಡಿಸಿಕೊಂಡಿರುವ ಕುರಿತು ಕೂಡಲೇ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದರು.

ಈಗಾಗಲೇ ಎರಡು ಕಡೆ ಅನಧಿಕೃತ ಬ್ಯಾನರ್ ಗಳು ಬಳಕೆಯಾಗಿರುವುದು ಕಂಡು ಬಂದಿದೆ. ಈ ಕುರಿತು ಗಲಾಟೆಯಾಗಿ 3 ಪ್ರಕರಣಗಳು ಸಹ ದಾಖಲಾಗಿವೆ. ಇಂಥವುಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ರೀತಿಯ ಬ್ಯಾನರ್ ಗಳು ಕಂಡು ಬಂದಲ್ಲಿ ಕೂಡಲೇ ತೆರವು ಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ್ ಕೋಣಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ್, ಬೆಳಗಾವಿ ತಹಶೀಲ್ದಾರ್ ಸಿದ್ದರಾಯ ಭೋಸಗಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ರಾಜೀವ ಕೂಲೇರ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *