ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಪ್ರೊ.ಲಿಂಗಪ್ಪ ಅವರು ಡಾ.ಬಾಬು ಜಗಜೀವನ್‍ರಾಂ ಅವರ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಸಮುದಾಯಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಇದ್ದರು.