ಬಳ್ಳಾರಿ : ಇಲ್ಲಿನ ಬ್ರೂಸ್ ಪೇಟೆ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನ ಜಪ್ತಿ ಮಾಡಲಾಗಿದೆ.
ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ ಬಜಾರ್‌ನಲ್ಲಿರುವ ಹೇಮಾ ಜ್ಯೂವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಹಣ, ಆಭರಣಗಳನ್ನು ಜಪ್ತಿ ಮಾಡಲಾಗಿದೆ.
ಒಟ್ಟು 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ನಗದು ಹವಾಲಾಕ್ಕೆ ಸಂಬಂಧಿಸಿದ ಹಣ ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿ ನರೇಶ್ ಎಂಬಾತನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.