ಮೊಳಕಾಲ್ಮೂರು : ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಲ್ಲಿ ಧ್ವನಿ ಎತ್ತಲು ಬಲ ತುಂಬಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಕಾರ್ಯಕರ್ತರಿಗೆ ಕರೆ ನೀಡಿದರು.
ರಾಂಪುರದಲ್ಲಿ ಶನಿವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು ಸಭೆ ಉದ್ಘಾಟಿಸಿ ಮಾತನಾಡಿದ ಸಚಿವ ಸುಧಾಕರ್, ಸ್ಥಳೀಯವಾಗಿ ಜನರಿಗೆ ಸ್ಪಂದಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ದೂರದ ಜಿಲ್ಲೆಯಿಂದ ಬಂದಿರುವ ಅಭ್ಯರ್ಥಿಗಳಿಗೆ ಮಳೆ ಹಾಕಿ ಮತ ವ್ಯರ್ಥ ಮಾಡಿಕೊಳ್ಳಬೇಡಿ. ಕಾಂಗ್ರೆಸ್ ಪಕ್ಷ ಐದು ಗ್ಯಾರೆಂಟಿಗಳನ್ನು ನೀಡಿದ್ದ ಭರವಸೆಯಂತೆ ಯಥಾವತ್ತು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಈ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಜನಪರ ಸರ್ಕಾರವನ್ನು ಕೇಂದ್ರದಲ್ಲಿ ಪುನಃ ಸ್ಥಾಪಿಸಬೇಕಿದೆ ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ತೆರಿಗೆ ಪಾಲಿನಲ್ಲಿ ತೀರ್ವ ಅನ್ಯಾಯವಾಗುತ್ತದೆ. ನಮ್ಮ ರಾಜ್ಯದ ಜನರು ಪಾವತಿಸುವ ನೂರು ರೂಪಾಯಿ ತೆರಿಗೆ ಹಣದಲ್ಲಿ ನಮಗೆ ಸರಾಸರಿ ರೂ 13 ಮಾತ್ರ ವಾಪಸ್ ಆಗುತ್ತಿದೆ. ಇದನ್ನು ಇತ್ತೀಚಿಗೆ ರಾಜ್ಯ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ಮೂಲಕ ಪ್ರಶ್ನಿಸಿದೆ ಇಂತಹ ಅನ್ಯಾಯಕ್ಕೆ ಈ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕೈ ಬಲಪಡಿಸಬೇಕಾಗಿದೆ ಎಂದರು.
ಮಾಜಿ ಸಚಿವ ಎಚ್ ಆಂಜನೇಯ ಮಾತನಾಡಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ 25 ಗ್ಯಾರಂಟಿ ಯೋಜನೆಗಳನ್ನು ಜಾರಿ ಭರವಸೆ ನೀಡಲಾಗಿದೆ. ಎಲ್ಲಾ ವರ್ಗಗಳ ಜನರ ಹಿತ ಕಾಯುವ ಪಕ್ಷವಾಗಿ ಕಾಂಗ್ರೆಸ್ ವರಹಮ್ಮಿದ್ದು ಅಧಿಕಾರ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.
ಅಭ್ಯರ್ಥಿ ಬಿಎನ್ ಚಂದ್ರಪ್ಪ ಮಾತನಾಡಿ ಜಿಲ್ಲೆಯ ಆರು ಶಾಸಕ ಸ್ಥಾನಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಶಾಸಕರಿದ್ದು ಇನ್ನುಳಿದ 4 ವರ್ಷ ಅವಧಿಯನ್ನು ಹೊಂದಿದ್ದಾರೆ. ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದಲ್ಲಿ ಶಾಸಕರ ಜೊತೆಗೋಡಿ ಅಭಿವೃದ್ಧಿಗೆ ಶ್ರಮಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಶಿಕ್ಷಣ ಕಾರ್ಯಕ್ರಮಗಳು ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಹೊತ್ತು ನೀಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಮಾತನಾಡಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಬಡವರ ಬದುಕನ್ನು ಬದಲಾಯಿಸಲಾಗಿದೆ. ಗ್ಯಾರಂಟಿ ಯೋಜನೆಯಿಂದ ನೆಮ್ಮದಿ ಬದುಕು ನಡೆಸುವಲ್ಲಿ ಸಹಕಾರಿಯಾಗಿದ್ದು. ಕಳೆದ ಲೋಕಸಭೆಯಲ್ಲಿ ಗೆದ್ದ ಸಂಸದರು ಜನರ ನಿರೀಕ್ಷೆಯಂತೆ ಕೆಲಸ ಮಾಡಿಲ್ಲ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆಶೀರ್ವಾದ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಕಡೆಗೆ ಹೆಜ್ಜೆ ಹಾಕಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎನ್ ವೈ ಗೋಪಾಲಕೃಷ್ಣ, ಕೆಸಿ ವೀರೇಂದ್ರ, ರಾಜ್ಯ ದ್ರಾಕ್ಷಾರಸ ಹಾಗೂ ವೈನ್ ಬೋರ್ಡ್ ಅಧ್ಯಕ್ಷ ಬಿ ಯೋಗೇಶ್ ಬಾಬು, ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ಮುಖಂಡರಾದ ಜಯಮ್ಮ ಬಾಲಕೃಷ್ಣ ರಾಜ್, ಜಿ ಎಸ್ ಕುಮಾರ್ ಗೌಡ, ಎಚ್.ಟಿ. ನಾಗೀರೆಡ್ಡಿ, ಜಿ ಕೃಷ್ಣಮೂರ್ತಿ, ನಾಗಸಮುದ್ರ ಗೋವಿಂದಪ್ಪ, ಟೀಕೆ ಕಲೀಂವುಲ್ಲಾ, ಎಸ್ ಖಾದರ್ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.