ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು, ತುಮಕೂರು ಜಿಲ್ಲೆಯ ಸಮಸ್ತ ನಾಗರೀಕರಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದರು. ನಂತರ ಜನರಿಗೆ ಸೂಕ್ತ ಬಂದೋಬಸ್ತ್ ಹಾಗೂ ಶಿಸ್ತನ್ನು ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿಯನ್ನು ಒದಗಿಸಿದರು.
ದಿನಾಂಕ: 09-04-2024 ರಂದು ನಡೆಯುವ ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಕಲ್ಯಾಣ ಮಂಟಪ, ಹೋಟೆಲ್, ವಸತಿ ಗೃಹಗಳು, ಮನೆ, ತೋಟದ ಮನೆಗಳು, ರಸ್ತೆಯ ಬದಿಗಳಲ್ಲಿ ಟೆಂಟ್ ನಿರ್ಮಿಸಿಕೊಂಡು ಜೂಜಾಡುವುದನ್ನು ನಿಷೇಧಿಸಲಾಗಿದೆ.
ಇಂದಿನಿಂದ ಈ ಸಂಬಂಧ ಯಾವುದೇ ರೀತಿಯ ಜೂಜಾಟ ಕಂಡುಬಂದಲ್ಲಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ. ಹಾಗೂ ಇದಕ್ಕೆ ಪ್ರೋತ್ಸಾಹಿಸಿದ ಸ್ಥಳದ ಮಾಲೀಕರು/ ಮಧ್ಯವರ್ತಿಗಳ ಮೇಲು ಕಾನೂನು ರೀತಿ ಕ್ರಮ ಜರುಗಿಸಲಾಗುವುದು.
ಮತ್ತು ಇದಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಹಾಗೂ ಅಕ್ರಮ ಜೂಜಾಟದಲ್ಲಿ ತೊಡಗುವವರ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು.
ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಜೂಜಾಟದಲ್ಲಿ ತೊಡಗುವುದಾಗಲಿ ಅದಕ್ಕೆ ಅವಕಾಶ ಮಾಡಿಕೊಡುವುದಾಗಲಿ ಪ್ರೋತ್ಸಾಹ ಕೊಡುವುದಾಗಲಿ ಮಾಡಬಾರದಾಗಿ ಈ ಮೂಲಕ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾ ಪೊಲೀಸ್ ಕಛೇರಿ. ತುಮಕೂರು ಜಿಲ್ಲೆ ಪೊಲೀಸ್ ವರಿಷ್ಠ ಅಧಿಕಾರಿಗಳು ತಿಳಿಸಿದರು.