ವಿಜಯಪುರ : ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಶ್ರೀಗಳು (ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ) ಅಸಮಾಧಾನ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ (ವಿಜಯಪುರ) ಮಾತನಾಡಿದ ಅವರು, ನಗರ್‌ಪೇಟೆಯಲ್ಲಿ (ನಾಗರ್ಥ ಪೇಟೆ ದಾಳಿ ಪ್ರಕರಣ) ಹನುಮಾನ್ ಚಾಲಿಸಾ ಹಲ್ಲೆಗೊಳಗಾದ ಮುಖೇಶ್ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ದುಷ್ಕೃತ್ಯಗಳಿಗೆ ಕೈ ಹಾಕಬಾರದು. ಎಲ್ಲಾ ಸಮಾಜಗಳನ್ನು ಒಟ್ಟಾಗಿ ಕೊಂಡೊಯ್ಯುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಕಿವಿಮಾತು ಹೇಳಿದರು.
ರಾಮನವಮಿ ದಿನದಂದು ಅಯೋಧ್ಯೆಗೆ ಭಕ್ತರು ಬರಬೇಡಿ. ತಮ್ಮ ತಮ್ಮಗಳಲ್ಲಿ ರಾಮನವಮಿ ಆಚರಿಸಿ. ಆ ದಿನ ಅಯೋಧ್ಯೆಗೆ ಭಕ್ತರು ಬಂದಲ್ಲಿ ದರ್ಶನಕ್ಕೆ ತೊಂದರೆಯಾಗಲಿದೆ. ತಮ್ಮ ಯಾವ ಮಂದಿರ, ಮನೆಗಳಲ್ಲೇ ರಾಮನವಮಿ ಆಚರಿಸಿ ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
ಈಗಲೇ ಪ್ರತಿ ಗಂಟಗೆ ರಾಮಮಂದಿರದಲ್ಲಿ 15 ಸಾವಿರ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ನಿತ್ಯ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ರಾಮನವಮಿಗೆ ಹೆಚ್ಚಿನ ಭಕ್ತರು ಆಗಮಿಸಿದಾಗ ತೊಂದರೆ ಉಂಟಾಗಲಿದೆ ಎಂದು ಅವರು ಈ ಮುನ್ನೆಚ್ಚರಿಕೆ ನೀಡಿದ್ದಾರೆ.